ಮಂಗಳೂರು ವಿ.ವಿ. ಮಟ್ಟದ ಹಗ್ಗ ಜಗ್ಗಾಟ: ಆಳ್ವಾಸ್ ಚಾಂಪಿಯನ್‌

| Published : May 11 2025, 01:20 AM IST

ಮಂಗಳೂರು ವಿ.ವಿ. ಮಟ್ಟದ ಹಗ್ಗ ಜಗ್ಗಾಟ: ಆಳ್ವಾಸ್ ಚಾಂಪಿಯನ್‌
Share this Article
  • FB
  • TW
  • Linkdin
  • Email

ಸಾರಾಂಶ

ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ, ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ, ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿತು.ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ಪ್ರವೇಶಿಸಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತು.ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.