ಸಾರಾಂಶ
ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ ೨೧೦ ಕಾಲೇಜುಗಳ ಪೈಕಿ ವೈಯಕ್ತಿಕ ಕ್ರೀಡೆ ಮತ್ತು ಗುಂಪು ಆಟಗಳ ೪೨ ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ ಪಟ್ಟ ಗಳಿಸಿದೆ.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ ೨೧೦ ಕಾಲೇಜುಗಳ ಪೈಕಿ ವೈಯಕ್ತಿಕ ಕ್ರೀಡೆ ಮತ್ತು ಗುಂಪು ಆಟಗಳ ೪೨ ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು, ಈ ಶೈಕ್ಷಣಿಕ ವರ್ಷದಲ್ಲಿಯೂ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್‌ಷಿಪ್ ಪಟ್ಟ ತನ್ನದಾಗಿಸಿಕೊಂಡಿದೆ.ಆಳ್ವಾಸ್ ಕಾಲೇಜು ಸತತ ೨೩ ವರ್ಷಗಳಿಂದ ಈ ಸಾಧನೆ ಮೆರೆಯುತ್ತಾ ಬಂದಿದೆ. ಈ ಬಾರಿ ಪುರುಷರ ವಿಭಾಗದಲ್ಲಿ ೩೦೮ ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿಯೂ ೩೦೮ ಅಂಕಗಳನ್ನು ಗಳಿಸಿ ಒಟ್ಟು ೬೧೬ ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದೆ.ಅಥ್ಲೆಟಿಕ್ಸ್, ಕ್ರಾಸ್‌ಕಂಟ್ರಿ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಖೋ-ಖೋ, ವಾಲಿಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಸಾಫ್ಟ್‌ಬಾಲ್, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಕ್ರಿಕೆಟ್, ಚೆಸ್, ಕರಾಟೆ, ಟೇಬಲ್ ಟೆನ್ನಿಸ್, ನೆಟ್‌ಬಾಲ್, ಹಾಕಿ, ಫುಟ್‌ಬಾಲ್, ಕುಸ್ತಿ, ಟಗ್ ಆಫ್ ವಾರ್ ಸೇರಿದಂತೆ ಅನೇಕ ಕ್ರೀಡಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಮಂಗಳೂರು ವಿವಿ ಅಂಕಗಳನ್ನು ಲೆಕ್ಕ ಹಾಕಿ ಸ್ಥಾನ ನೀಡುತ್ತದೆ. ಈ ಪ್ರಕ್ರಿಯೆಯಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡಗಳು ಪ್ರಥಮ ಸ್ಥಾನದೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆದಿವೆ.ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಶ್ಲಾಘಿಸಿದ್ದಾರೆ.