ಚಡ್ಡಿ ಗ್ಯಾಂಗ್‌ ಮನೆಗಳ್ಳತನ ಬಗ್ಗೆ ಜಾಗ್ರತೆ ವಹಿಸುವಂತೆ ಮಂಗಳೂರು ಪೊಲೀಸ್‌ ಸೂಚನೆ

| Published : Jul 09 2024, 12:55 AM IST

ಚಡ್ಡಿ ಗ್ಯಾಂಗ್‌ ಮನೆಗಳ್ಳತನ ಬಗ್ಗೆ ಜಾಗ್ರತೆ ವಹಿಸುವಂತೆ ಮಂಗಳೂರು ಪೊಲೀಸ್‌ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ನಗರದಲ್ಲಿ ಅಂತಾರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಳೆಗಾಲದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮಂಗಳೂರು ಪೊಲೀಸರು ನಾಗರಿಕರಲ್ಲಿ ವಿನಂತಿಸಿದ್ದಾರೆ.

ಮಂಗಳೂರು ನಗರದಲ್ಲಿ ಅಂತಾರಾಜ್ಯ ಕಳ್ಳರು /ಚಡ್ಡಿ ಗ್ಯಾಂಗ್ /ಮನೆ ಕಳ್ಳತನ ಮಾಡುವವರು ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆಯನ್ನು ವಹಿಸುವುವಂತೆ ಸೂಚಿಸಿದ್ದಾರೆ. ಇದಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ರಾತ್ರಿ ಸಮಯ ಮನೆಯ ಕಿಟಕಿ ಬಾಗಿಲುಗಳನ್ನು ಭದ್ರವಾಗಿ ಹಾಕಿಕೊಳ್ಳುವುದು. ತಮ್ಮ ಬೆಲೆಬಾಳುವ ಸೊತ್ತುಗಳನ್ನು ಮನೆಯಲ್ಲಿಡದೆ ಸೇಫ್ ಲಾಕರ್‌ನಲ್ಲಿ ಇರಿಸುವುದು. ತಮ್ಮ ಮನೆಯ ಮತ್ತು ವಾಸ್ತವ್ಯದ ಪರಿಸರದಲ್ಲಿ ಇರುವ ಸಿಸಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿ ಇರಿಸುವುದು. ಯಾವುದೇ ಅಪರಿಚಿತ ಅಥವಾ ಸಂಶಯಾಸ್ಪದ ವ್ಯಕ್ತಿಗಳು, ಮಹಿಳೆಯರು ಕಂಡುಬಂದಲ್ಲಿ ಕೂಡಲೇ ತುರ್ತು ಕರೆ ಸೇವೆ 112, city control room 9480802321, ಕಂಕನಾಡಿ ನಗರ ಪೊಲೀಸ್ ಠಾಣೆ 08242220529, ಪೊಲೀಸ್ ನಿರೀಕ್ಷಕರು 9480805354 ಈ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸುವುದು.ವಸತಿ / ಬಡಾವಣೆ / ಪರಿಸರದಲ್ಲಿ ದಾರಿ ದೀಪ, ಸಾರ್ವಜನಿಕ ದೀಪಗಳು ಉರಿಯುತ್ತಿರುವ ಬಗ್ಗೆ ದೃಡಪಡಿಸುವುದು, ಇಲ್ಲದಿದ್ದಲ್ಲಿ ಮೆಸ್ಕಾಂ /ಮಂಗಳೂರು ಮಹಾನಗರ ಪಾಲಿಕೆ/ ಸ್ಥಳೀಯ ಕಾರ್ಪೋರೇಟರ್‌ಗಳಿಗೆ ತಿಳಿಸುವುದು (ಅಗತ್ಯ ಸಹಕಾರ ನಿರೀಕ್ಷಿಸಿದ್ದಲ್ಲಿ ಕಂಕನಾಡಿ ನಗರ ಠಾಣೆಯ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ )`ಒಂಟಿ ಮನೆಗಳು/ ಲಾಕ್ಡ್ ಹೌಸ್/ಹಿರಿಯ ನಾಗರಿಕರು / ಮಹಿಳೆಯರು ಮಾತ್ರ ವಾಸ್ತವ್ಯ ಇರುವ ಮನೆಗಳು ಇದ್ದಲ್ಲಿ ಬೀಟ್ ಪೊಲೀಸರಿಗೆ ಮಾಹಿತಿ ನೀಡಬಹುದು ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.