ಬಾರ್ಕೂರು ಸರ್ಕಾರಿ ಕಾಲೇಜಿನಲ್ಲಿ ಮಂಗಳೂರು ವಿವಿ ಟ್ಯಾಲೆಂಟ್‌ ಹಂಟ್‌ ಸಂಪನ್ನ

| Published : Jan 08 2025, 12:17 AM IST

ಬಾರ್ಕೂರು ಸರ್ಕಾರಿ ಕಾಲೇಜಿನಲ್ಲಿ ಮಂಗಳೂರು ವಿವಿ ಟ್ಯಾಲೆಂಟ್‌ ಹಂಟ್‌ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕಾಮರ್ಸ್ ಫೋರಂ, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಕನ್ನಡಪ್ರಭ ವಾರ್ತೆ ಬಾರ್ಕೂರು

ಇಲ್ಲಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕಾಮರ್ಸ್ ಫೋರಂ, ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ಮಾತನಾಡಿ, ಅಂತರ್ ಕಾಲೇಜು ಮಟ್ಟದ ಸ್ಪರ್ಧೆಗಳು ಸ್ನಾತಕೋತ್ತರ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದ್ದು, ಈ ಅಣಕು ಸಂದರ್ಶನ ಮತ್ತು ತುಣುಕು ವಿಡಿಯೋ ಸ್ಪರ್ಧೆಯು ವಿದ್ಯಾರ್ಥಿಗಳ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.ಕಾರ್ಯಕ್ರಮವನ್ನು ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಜಯಲಕ್ಷ್ಮೀ ಉದ್ಘಾಟಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶೋಭಾ ಆರ್., ಸಹಾಯಕ ಪ್ರಾಧ್ಯಾಪಕ ಅನಿಲ್ ಕುಮಾರ್ ಕೆ.ವೈ., ಸುಮ ಟಿ.ಕೆ., ಡಾ. ಹೇಮಾ ಎಸ್. ಕೊಡದ್, ಡಾ. ಶ್ರೀದೇವಿ, ಡಾ. ಗಣೇಶ್ ಪ್ರಸಾದ್ ಮತ್ತು ಗ್ರಂಥಪಾಲಕ ಹರೀಶ್ ಸಿ.ಕೆ. ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಯೋಜಕ, ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧಾಪಕ ರಾಧಾಕೃಷ್ಣ ನಾಯಕ್, ಪ್ರಾಸ್ತಾವಿಕ ಭಾಷಣ ಮಾಡಿದರು. ಅಂತಿಮ ಎಂಕಾಂನ ವಿದ್ಯಾರ್ಥಿನಿ ಸಂಜಲಿ ಬಿ. ಸ್ವಾಗತಿಸಿದರು ಮತ್ತು ಜಿ. ರಂಜಿತಾ ಕಾರ್ಯಕ್ರಮ ನಿರೂಪಿಸಿದರು.