ಮಾಂಗಲ್ಯ ಕಿತ್ತುಕೊಂಡುಪರಾರಿಯಾಗುತ್ತಿದ್ದ ಸೆರೆ

| Published : Oct 08 2025, 02:03 AM IST

ಮಾಂಗಲ್ಯ ಕಿತ್ತುಕೊಂಡುಪರಾರಿಯಾಗುತ್ತಿದ್ದ ಸೆರೆ
Share this Article
  • FB
  • TW
  • Linkdin
  • Email

ಸಾರಾಂಶ

ವಾಯು ವಿಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಓಡಿ ಹೋಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಯು ವಿಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಓಡಿ ಹೋಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಆರೋಪಿ ಆಂಧ್ರಪ್ರದೇಶದ ಕಡಪ ಮೂಲದ ಪೋತು ನರಸಿಂಹ ರೆಡ್ಡಿ (22) ಎಂಬಾತನಿಂದ ₹6 ಲಕ್ಷ ಮೌಲ್ಯದ 60 ಗ್ರಾಂ ಚಿನ್ನದ ಮಾಂಗಲ್ಯ ಸರ ಜಪ್ತಿ ಮಾಡಲಾಗಿದೆ. ಜೆ.ಪಿ.ನಗರ 3ನೇ ಹಂತದ 12ನೇ ಎ ಕ್ರಾಸ್‌ ನಿವಾಸಿ ರೇವತಿ ಆನಂದ್‌ ಅವರು ಅ.4ರಂದು ಸಂಜೆ ಮನೆ ಸಮೀಪದ ಮಿನಿ ಫಾರೆಸ್ಟ್‌ ಪಾರ್ಕ್‌ನಲ್ಲಿ ವಾಯ ವಿಹಾರ ಮುಗಿಸಿ ಸಂಜೆ ಸುಮಾರು 6 ಗಂಟೆಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬಂದಿರುವ ಅಪರಿಚಿತ ವ್ಯಕ್ತಿ ಏಕಾಏಕಿ ರೇವತಿ ಅವರ ಮಾಂಗಲ್ಯ ಸರ ಕಿತ್ತುಕೊಂಡು ಓಡಲು ಆರಂಭಿಸಿದ್ದಾನೆ.

ಈ ವೇಳೆ ರೇವತಿ ಅವರು ಜೋರಾಗಿ ಕಿರುಚಿದ್ದಾರೆ. ಆಗ ಅಲ್ಲಿದ್ದ ಸಾರ್ವಜನಿಕರು, ಆರೋಪಿಯನ್ನು ಬೆನ್ನಟ್ಟಿ ಹಿಡಿದು ಧರ್ಮದೇಟು ನೀಡಿದ್ದಾರೆ. ಈ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಆರೋಪಿಯನ್ನು ವಶಕ್ಕೆ ಪಡೆದು ಮಾಂಗಲ್ಯ ಸರವನ್ನು ವಶಕ್ಕೆ ಪಡೆದಿದ್ದಾರೆ. ರೇವತಿ ಅವರು ನೀಡಿದ ದೂರಿನ ಮೇರೆಗೆ ಜೆ.ಪಿ.ನಗರ ಠಾಣೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.