ಸಾರಾಂಶ
ಬೈಕ್ ರ್‍ಯಾಲಿ ಜಿಲ್ಲಾ ಪಂಚಾಯತ್ ಆವರಣದಿಂದ ನಗರದ ಪುರಭವನದವರೆಗೆ ಸಾಗಿ ಅಲ್ಲಿ ಅಂತ್ಯಗೊಂಡಿತು. ಸುಮಾರು 200ಕ್ಕೂ ಹೆಚ್ಚು ಬೈಕುಗಳು ರ್‍ಯಾಲಿಯಲ್ಲಿ ಭಾಗವಹಿಸಿದ್ದವು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವದ ಬಗ್ಗೆ ನಗರ ವಾಸಿಗಳಲ್ಲಿ ಜಾಗೃತಿ ಮೂಡಿಸಲು ಬೈಕ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಜಿಲ್ಲಾ ಚುನಾವಣಾ ರಾಯಭಾರಿ, ಹಾಸ್ಯನಟ ಅರವಿಂದ ಬೋಳಾರ್ ಅವರು ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿದರು.
ಬೈಕ್ ರ್‍ಯಾಲಿ ಜಿಲ್ಲಾ ಪಂಚಾಯತ್ ಆವರಣದಿಂದ ನಗರದ ಪುರಭವನದವರೆಗೆ ಸಾಗಿ ಅಲ್ಲಿ ಅಂತ್ಯಗೊಂಡಿತು. ಸುಮಾರು 200ಕ್ಕೂ ಹೆಚ್ಚು ಬೈಕುಗಳು ರ್‍ಯಾಲಿಯಲ್ಲಿ ಭಾಗವಹಿಸಿದ್ದವು.