ಬೀದಿ ನಾಟಕದ ಮೂಲಕ ನಗರದೆಲ್ಲೆಡೆ ಮತದಾನ ಜಾಗೃತಿ

| Published : Mar 27 2024, 01:04 AM IST

ಸಾರಾಂಶ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿ ನಾಟಕ ಮೂಲಕ ಅದ್ಭುತವಾಗಿ ತಿಳಿಸಿಕೊಟ್ಟ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಸ್ವೀಪ್ ಸಮಿತಿ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ತಾಲೂಕು ಪಂಚಾಯ್ತಿ ಸಹಯೋಗದಲ್ಲಿ ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಸಿಟಿ ಸೆಂಟರ್, ಪ್ರೆಸ್ ಕ್ಲಬ್ ಹಾಗೂ ಬೆಂಗರೆ ಪರಿಸರದ ಬಳಿ ಸೈಂಟ್ ಆಗ್ನೆಸ್ ವಿದ್ಯಾರ್ಥಿಗಳಿಂದ ಬೀದಿನಾಟಕ ಮೂಲಕ ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಮುಖ್ಯ ಅತಿಥಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿ ನಾಟಕ ಮೂಲಕ ಅದ್ಭುತವಾಗಿ ತಿಳಿಸಿಕೊಟ್ಟ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಏಪ್ರಿಲ್ 26ರಂದು ಅರ್ಹ ಮತದಾರರೆಲ್ಲರೂ ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ಕರೆ ನೀಡಿದರು.

ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಅಪ್ಪಣ್ಣ ಕೆ.ಸಿ, ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಎನ್ಎಸ್ಎಸ್ ಅಧಿಕಾರಿ ಡಾ. ಉದಯ ಕುಮಾರ್, ಸ್ವೀಪ್ ಸಮಿತಿ ಸದಸ್ಯ ಡೊಂಬಯ್ಯ ಇಡ್ಕಿದು, ತಾಲೂಕು ಪಂಚಾಯ್ತಿ ಐಇಸಿ ಸಂಯೋಜಕಿ ನಿಶ್ಮಿತಾ ಬಿ. ಹಾಗೂ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಸಿಬ್ಬಂದಿ ಇದ್ದರು.