ಸಾರಾಂಶ
ಪಾಂಡವಪುರ:
ತಾಲೂಕಿನ ಮಾಣಿಕ್ಯನಹಳ್ಳಿ ಜಯರಾಮು ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡರು ನೇಮಕ ಮಾಡಿದ್ದಾರೆ.ಜಯರಾಮು ತಾಲೂಕಿನ ಲಕ್ಷ್ಮಿ ಸಾಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೌಕರ ಸಂಘದ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ರಾಜ್ಯ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ತಾಲೂಕು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಶಿಕ್ಷಕರ ಸಮಸ್ಯೆಗಳಿಗಾಗಿ ಹೋರಾಟ ಮಾಡುತ್ತಾ ಶಿಕ್ಷಕರ ಸ್ನೇಹಿಯಾಗಿದ್ದಾರೆ ಕೆಲಸ ಮಾಡಿದ್ದಾರೆ.
ಇವರ ಸಂಘಟನಾ ಚಾತುರ್ಯ ಮನಗಂಡು ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ. ನೇಮಕಾತಿ ಪತ್ರ ವಿತರಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡ, ಕಾರ್ಯದರ್ಶಿ ಗಿರಿಗೌಡ, ಗೌರವಾಧ್ಯಕ್ಷ ಬಸವರಾಜ್, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಅಖಿಲ ಕರ್ನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಪಾಂಡವಪುರ ತಾಲೂಕು ನೌಕರರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.ಖಜಾಂಚಿಯಾಗಿ ಗೋಪಾಲಗೌಡ ಆಯ್ಕೆ, ಅಭಿನಂದನೆ
ಕನ್ನಡಪ್ರಭ ವಾರ್ತೆ ಮೇಲುಕೋಟೆರಾಜ್ಯ ಶಿಕ್ಷಣಾಧಿಕಾರಿಗಳ ಸಂಘದ ನೂತನ ಖಜಾಂಚಿಯಾಗಿ ಚಿಟ್ಟನಹಳ್ಳಿಯ ಅ.ಒ.ಗೋಪಾಲೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕರ ವೃಂದದಿಂದ ನಿರ್ದೇಶಕ ವೃಂದದವರೆಗಿನ ಎಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳನ್ನೊಳಗೊಂಡ ಈ ಸಂಘ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಘವಾಗಿದೆ. ರಾಜ್ಯಾಧ್ಯಕ್ಷ ಕೆ.ಜಿ.ಆಂಜನಪ್ಪ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ತೆರವಾಗಿದ್ದ ರಾಜ್ಯ ಮಟ್ಟದ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆದು ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹಕ್ಕಿ ಹಾಗೂ ಖಜಾಂಚಿ ಹುದ್ದೆಗೆ ಅ.ಒ.ಗೋಪಾಲಗೌಡರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಈಗ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿರುವ ಚಿಟ್ಟನಹಳ್ಳಿಯ ಅ.ಒ. ಗೋಪಾಲಗೌಡರನ್ನು ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಮೇಲುಕೋಟೆ ಮುಖ್ಯಶಿಕ್ಷಕ ಸಂತಾನರಾಮನ್, ಪಮ.ನಂಜುಂಡಸ್ವಾಮಿ ಅಭಿನಂದಿಸಿದ್ದಾರೆ.