ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ

| Published : Feb 16 2025, 01:45 AM IST

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಆಚರಿಸಲಾಯಿತು. ಮಕ್ಕಳ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಬೆಂಬಲ ಸೂಚಿಸುವ ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಆಚರಿಸಲಾಯಿತು.

ಮಕ್ಕಳ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಬೆಂಬಲ ಸೂಚಿಸುವ ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳು ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸಮಾಜದ ಪಾತ್ರ ನಿರ್ಣಾಯಕವಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಪ್ರತಿ ಮಗು, ಸಮಗ್ರ ಆರೈಕೆ ಮತ್ತು ಅರ್ಹ ಚಿಕಿತ್ಸೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಸಮಾಜದ ಸಹಯೋಗದ ಅಗತ್ಯವಿದೆ ಎಂದರು.ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಆಸ್ಪತ್ರೆಯ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ. ಸುಬಾ ಸೂರಿಯ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಮತ್ತು ಒನ್ ಗುಡ್ ಸ್ಟೆಪ್ ಫೌಂಡೇಶನ್‌ನ ಸಂಸ್ಥಾಪಕಿ ಅಮಿತಾ ಪೈ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಮತ್ತು ಸಹೋದ್ಯೋಗಿಗಳು ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.ನಂತರ ಕ್ಯಾನ್ಸರ್‌ ಪೀಡಿತ ಮಕ್ಕಳು ಮತ್ತು ಅವರ ಪೋಷಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳ ಮೂಲಕ ಈ ದಿನವನ್ನು ಸಂತೋಷದಿಂದ ತುಂಬಿರುವಂತೆ ಆಯೋಜಿಸಲಾಯಿತು.