ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಿ ಬ್ಲಾಕ್‌ನಲ್ಲಿ ಸಂಸದರ ಅಧಿಕೃತ ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಿ ಬ್ಲಾಕ್‌ನಲ್ಲಿ ಸೋಮವಾರ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧಿಕೃತ ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿ ಶುಭ ಹಾರೈಸಿದರು.ನಂತರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರ ಮನವಿ ಸ್ವೀಕಾರ, ಕುಂದುಕೊರತೆಗಳನ್ನು ಆಲಿಸುವ ಜತೆಗೆ ಕೇಂದ್ರ ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಮಟ್ಟಾರ್ ರತ್ನಾಕರ್ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್ ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಶ್ರೀಶ ನಾಯಕ್ ಪೆರ್ಣಂಕಿಲ, ಕಿರಣ್ ಕುಮಾರ್ ಬೈಲೂರು, ರಾಜೇಶ್ ಕಾವೇರಿ, ಐರೋಡಿ ವಿಠಲ ಪೂಜಾರಿ, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶಿವಕುಮಾರ್ ಅಂಬಲಪಾಡಿ, ಸುರೇಶ್ ಶೆಟ್ಟಿ ಕಾಡೂರು, ಸುಪ್ರಸಾದ್ ಶೆಟ್ಟಿ ಬೈಕಾಡಿ, ಸದಾನಂದ ಉಪ್ಪಿನಕುದ್ರು, ಸದಾನಂದ ಬಳ್ಕೂರು, ಜಿತೇಂದ್ರ ಶೆಟ್ಟಿ ಉದ್ಯಾವರ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶಂಕರ ಅಂಕದಕಟ್ಟೆ ಉಪಸ್ಥಿತರಿದ್ದರು.* ಮೊದಲ ದಿನವೇ ಅಹವಾಲು ಸ್ವೀಕಾರ
ಸಂಸದರು ಪತ್ನಿ, ಪುತ್ರಿಯೊಂದಿಗೆ ಕಚೇರಿಯಲ್ಲಿ ವಿಶೇಷ ಹೋಮ ನೆರವೇರಿಸಿ, ಕಚೇರಿಗೆ ಚಾಲನೆ ನೀಡಿದರು. ಕಚೇರಿ ಉದ್ಘಾಟನೆಯ ಮಾಹಿತಿ ಪಡೆದಿದ್ದ ಸಾಕಷ್ಟು ಮಂದಿ ಸಾರ್ವಜನಿಕರು ಮೊದಲ ದಿನವೇ ಅಹವಾಲು ಹಿಡಿದು ಬಂದಿದ್ದು, ಸಂಸದರು ಅವುಗಳನ್ನು ಸ್ವೀಕರಿಸಿ ಮುಂದಿನ ಕ್ರಮಕ್ಕೆ ಸೂಚಿಸಿದರು.