ಉಡುಪಿ: ತುಳುಕೂಟ ಉಡುಪಿ ಮತ್ತು ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಸಹಯೋಗದಲ್ಲಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನಲ್ಲಿ ‘ಕಿನ್ಯ ಜೋಕ್ಲೆಡ್ದ್ ಸೊರ ಸಂಪು’ ಕಾರ್ಯಕ್ರಮ ಇಲ್ಲಿನ ಮುಕುಂದ ಕೃಪಾ ಶಾಲೆಯಲ್ಲಿ ನಡೆಯಿತು.ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಕಯ್ಯಾರ ಕಿಞ್ಞಣ್ಣ ರೈ ಅವರು ಬರೆದ ಪದ್ಯವನ್ನು ಹಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರ. ಮಹಾಕವಿಯಾಗಿ, ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿ ನಾಯಕರಾಗಿ, ಕಾಸರಗೋಡು ವಿಲೀನಿಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಲಕರಾಗಿ ನಿರಂತರವಾಗಿ ದುಡಿದವರು, ಕನ್ನಡ ಮತ್ತು ತುಳು ಭಾಷೆಗೆ ಅಪಾರವಾದ ಕೊಡುಗೆ ನೀಡಿದ ಕಿಞ್ಞಣ್ಣ ರೈ ಯವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದರು.
ಕಾರ್ಯಕ್ರಮದಲ್ಲಿ ತುಳುಕೂಟದ ಉಪಾಧ್ಯಕ್ಷ, ಕಿಞ್ಞಣ್ಣ ರೈಯವರ ಅಳಿಯ ಭುವನ ಪ್ರಸಾದ್ ಹೆಗ್ಡೆ, ತುಳುಕೂಟದ ಗೌರವ ಸಲಹೆಗಾರ ವಿಶ್ವನಾಥ ಶೆಣೈ, ರೇಡಿಯೋ ಮಣಿಪಾಲದ ಕಾರ್ಯಕ್ರಮ ಸಂಯೋಜಕಿ ಡಾ. ರಶ್ಮಿ ಅಮ್ಮೆಂಬಳ, ಮುಕುಂದ ಕ್ರಪಾ ಶಾಲೆಯ ಪ್ರಾಂಶುಪಾಲೆ ವಿನುತಾ ಎಸ್. ನಾಯಕ್ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕಿ ವಿದ್ಯಾ ಸರಸ್ವತಿ ಪ್ರಾಸ್ತಾವಿಕ ಮಾತನಾಡಿದರು. ತುಳುಕೂಟದ ಕಾರ್ಯಕಾರಿ ಸಮಿತಿಯ ಸದಸ್ಯೆ ಪ್ರಭಾವತಿ ವಿಶ್ವನಾಥ್ ಸ್ವಾಗತಿಸಿ, ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು. ಯಶೋದಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.ತುಳುನಾಡಿಗೆ ಕಯ್ಯಾರರ ಕೊಡುಗೆ ಅಪಾರ : ಬಿ.ಜಯಕರ ಶೆಟ್ಟಿ
ತುಳುಕೂಟ ಉಡುಪಿ ಮತ್ತು ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಸಹಯೋಗದಲ್ಲಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನಲ್ಲಿ ‘ಕಿನ್ಯ ಜೋಕ್ಲೆಡ್ದ್ ಸೊರ ಸಂಪು’ ಕಾರ್ಯಕ್ರಮ ಇಲ್ಲಿನ ಮುಕುಂದ ಕೃಪಾ ಶಾಲೆಯಲ್ಲಿ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.