ಸಾರಾಂಶ
ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ರೋಟರಿ ಕ್ಲಬ್ ಮಣಿಪಾಲ್ ವತಿಯಿಂದ ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಸಮಾಜಸೇವೆಯ ಮೂಲ ಉದ್ದೇಶದಿಂದ ರೋಟರಿ ಸಂಸ್ಥೆ ಮಹಿಳಾ ಶಿಕ್ಷಣಕ್ಕೆ ಪ್ರೋತ್ಸಾಹ ರೂಪದಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯದ ನಿರ್ಮಿಸಿಕೊಟ್ಟಿದೆ. ಅದನ್ನು ಸೂಕ್ತ ರೀತಿಯಲ್ಲಿ ಬಳಸಿ ಅದರ ಸ್ವಚ್ಛತೆ ಕಾಪಾಡಿ, ಮುಂದಿನ ವಿದ್ಯಾರ್ಥಿಗಳಿಗೆ ದಾರಿದೀಪಗಳಾಗಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿ ಶಾಸಕ ಯಶ್ಪಾಲ್ ಸುವರ್ಣ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ. ಗೌರಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ, ಡಯಟ್ ಉಪಪ್ರಾಂಶುಪಾಲ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಮಾ, ಪ್ರೌಢಶಾಲೆ ಮುಖ್ಯೋಪಧ್ಯಾಯಿನಿ ಇಂದಿರಾ, ಜುವಾರಿ ಆಗ್ರೀ ಕೆಮಿಕಲ್ ಸಂಸ್ಥೆಯ ಹಿರಿಯ ಪ್ರಬಂಧಕ ಅನಂತ ಪ್ರಭು ಗೋವಾ, ರೋಟರಿ ನಿರ್ದೇಶಕ ಅಮಿತ್ ಅರವಿಂದ್ ನಾಯಕ್, ರೋಟರಿ ನಿರ್ದೇಶಕಿ ರೇಣು ಜಯರಾಂ, ಡಾ. ಗಿರಿಜಾ, ಪ್ರೇಮಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರೋಟರಿ ಕ್ಲಬ್ ಮಣಿಪಾಲ್ ಅಧ್ಯಕ್ಷ ಶ್ರೀಪತಿ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಶ್ರೀಕಾಂತ್ ಪ್ರಭು ವಂದಿಸಿದರು. ರೋಟರಿ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.