ಸಾರಾಂಶ
ಕನ್ನಡಪ್ರಭ ವಾರ್ತೆ ಮಣಿಪಾಲಉಡುಪಿ ಜಿಲ್ಲಾ ಕ್ರೀಡಾ ಭಾರತಿ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ನಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ - 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು. ಮಣಿಪಾಲ ಹೈಸ್ಕೂಲ್ ಟ್ರಸ್ಟ್ ನ ಅಧ್ಯಕ್ಷ ಟಿ. ಸುಧಾಕರ್ ಪೈ ಅವರು ಪಂದ್ಯಾವಳಿ ಉದ್ಘಾಟಿಸಿ ಶುಭ ಹಾರೈಸಿದರು.ಅತಿಥಿಗಳಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕ ನಾರಾಯಣ ಶೆಣೈ, ಉಡುಪಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಮಣಿಪಾಲ್ ಜೂನಿಯರ್ ಕಾಲೇಜಿನ ಸಂಚಾಲಕ ಪ್ರಕಾಶ್ ಶೆಟ್ಟಿ, ಆಡಳಿತಾಧಿಕಾರಿ ಶೇಷಪ್ಪ ರೈ, ಪ್ರಾಂಶುಪಾಲೆ ರೂಪಾ ಎಲ್. ಭಟ್, ಉಪ ಪ್ರಾಂಶುಪಾಲೆ ಅನಿತಾ ಮಲ್ಯ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಆಗಮಿಸಿದ್ದರು.ಮಂಜುನಾಥ್ ಶೆಟ್ಟಿ ಬೈಲೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ತಾಲೂಕು ಯುವಜನ ಕ್ರೀಡಾಧಿಕಾರಿ, ಹಿತೇಶ್ ಶೆಟ್ಟಿ ಉಪಸ್ಥಿತರಿದ್ದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಶಾರೀರಿಕ ಪ್ರಮುಖರಾದ ಸತೀಶ್ ಕುತ್ಯಾರ್ ಪ್ರಸ್ತಾವನೆಗೈದರು. ಮಂಗಳೂರು ವಿಭಾಗ ಸಂಯೋಜಕರಾದ ಪ್ರಸನ್ನ ಶೆಣೈ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಲಿಂಗಯ್ಯ ಅವರು ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ನಗರ ಸಂಘ ಚಾಲಕರಾದ ಮಟ್ಟು ಲಕ್ಷ್ಮೀನಾರಾಯಣ, ನಗರಸಭಾ ಸದಸ್ಯರಾದ ನಗರಸಭಾ ಸದಸ್ಯ ವಿಜಯ ಕೊಡವೂರು, ಬೈಂದೂರು ತಾಲೂಕು ಕ್ರೀಡಾ ಭಾರತೀಯ ಅಧ್ಯಕ್ಷ ಜಯಾನಂದ ಹೋಬಳಿದಾರ್ ಅತಿಥಿಗಳಾಗಿದ್ದು ವಿಜೇತರಿಗೆ ಟ್ರೋಫಿ, ಪದಕ ಹಾಗೂ ನಗದು ಬಹುಮಾನಗಳನ್ನು ವಿರಿಸಲಾಯಿತು.