ಸೈಯದ್ ಸಾಬ್ ಆಶೀರ್ವಾದ ಪಡೆದ ಮಂಜಪ್ಪ, ವಡ್ನಾಳ್

| Published : Oct 07 2025, 01:02 AM IST

ಸೈಯದ್ ಸಾಬ್ ಆಶೀರ್ವಾದ ಪಡೆದ ಮಂಜಪ್ಪ, ವಡ್ನಾಳ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮತ್ತು ಜೀವ ವೈವಿಧ್ಯ ನಿಗಮ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಸೈಯದ್ ಸೈಫುಲ್ಲಾ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

ದಾವಣಗೆರೆ: ರಾಜ್ಯ ಸರ್ಕಾರದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮತ್ತು ಜೀವ ವೈವಿಧ್ಯ ನಿಗಮ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಸೈಯದ್ ಸೈಫುಲ್ಲಾ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

ಈ ವೇಳೆ ಸೈಯದ್ ಸೈಫುಲ್ಲಾ ಸಾಬ್ ಮಾತನಾಡಿ, ದಾವಣಗೆರೆಗೆ ಎರಡು ಮಂಡಳಿಗಳ ಅಧ್ಯಕ್ಷರ ಭಾಗ್ಯ ಸಿಕ್ಕಿದೆ. ಎಚ್. ಬಿ. ಮಂಜಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುವ ಜತೆಗೆ ಪಕ್ಷ ಸಂಘಟನೆ ಮಾಡಿದವರು. ಪಕ್ಷದ ಯುವಕರು, ಹಿರಿಯರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮಂಜಪ್ಪ ಅವರು ಅಧ್ಯಕ್ಷ, ಚನ್ನಗಿರಿ ಕಾಂಗ್ರೆಸ್ ಮುಖಂಡ ವಡ್ನಾಳ್ ಜಗದೀಶ್ ಅವರಿಎ ಮಂಡಳಿ ಅಧ್ಯಕ್ಷಗಿರಿ ಸಿಕ್ಕಿರುವುದು ಸಂತಸ ನೀಡಿದೆ ಎಂದರು.

ಎಚ್.ಬಿ.ಮಂಜಪ್ಪ, ವಡ್ನಾಳ್ ಜಗದೀಶ್ ಮಾತನಾಡಿ, ಸೈಯದ್ ಸೈಫುಲ್ಲಾ ಹಿರಿಯ ಮುಖಂಡರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಆಪ್ತರು. ಎಚ್.ಡಿ.ದೇವೇಗೌಡ, ಬಿ.ಎಸ್. ಯಡಿಯೂರಪ್ಪ, ಇತರ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಾಜಕಾರಣಿ ಎಂದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮತ್ತಿತರರು ಹಾಜರಿದ್ದರು.