ಮಂಜುಳಾಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ

| Published : Mar 29 2025, 12:32 AM IST

ಸಾರಾಂಶ

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಕೊಡಲಾಗುವ ವಿಧಾನಸೌಧ ನಿರ್ಮಾತೃ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ಪ್ರಶಸ್ತಿಯನ್ನು ತಾಲೂಕಿನ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ಡಿ ಇವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶ್ರೀ ಸರ್ವೇಜನಾ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶ್ರೀ ಸರ್ವೇಜನಾ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ೮ನೇ ವಾರ್ಷಿಕೋತ್ಸವದ ಸಾಂಸ್ಕೃತಿಕ ಮಹೋತ್ಸವದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಕೊಡಲಾಗುವ ವಿಧಾನಸೌಧ ನಿರ್ಮಾತೃ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ಪ್ರಶಸ್ತಿಯನ್ನು ತಾಲೂಕಿನ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ಡಿ ಇವರಿಗೆ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸರ್ವೇಜನಾ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್‌ನ ರಾಜ್ಯಾಧ್ಯಕ್ಷರಾದ ಲಕ್ಷಿತಾ, ಗೌರವಾಧ್ಯಕ್ಷರಾದ ಕೆಂಚನೂರು ಶಂಕರ, ಹಾವೇರಿ ಹೊಸಮಠದ ಬಸವ ಶಾಂತಲಿಂಗ ಮಹಾಸ್ವಾಮಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ನಿರ್ದೇಶಕ ಡಾ. ಕೆ.ಪಿ. ಪುತ್ತುರಾಯ, ಖ್ಯಾತ ಸುಗಮ ಸಂಗೀತ ಹಾಡುಗಾರರು, ಚಲನಚಿತ್ರ ಕಲಾವಿದರಾದ ಶಶಿಧರ್ ಕೋಟೆ, ಚಲನಚಿತ್ರ ನಟರಾದ ಶಿವಕುಮಾರ ಆರಾಧ್ಯ, ಲಯ ಕೋಕಿಲ ಮುಂತಾದವರು ಹಾಜರಿದ್ದರು.