ಎಂ. ಕೃಷ್ಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಬಿ.ಕೆ. ಮಂಜುನಾಥ್, ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರು ಉತ್ತಮ ಆಡಳಿತಗಾರರಾಗಿದ್ದರು. ಮಕ್ಕಳ ಮೇಲಿನ ಅವರ ಅಪಾರ ಪ್ರೀತಿ ಮತ್ತು ಕಾಳಜಿಯ ಸ್ಮರಣಾರ್ಥ ನವೆಂಬರ್‌ ೧೪ರಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಎಂ. ಕೃಷ್ಣ ಅಂಧ ಮಕ್ಕಳ ಶಾಲೆಯು ನಡೆದು ಬಂದ ಹಾದಿ ಹಾಗೂ ಸೇವಾ ಕಾರ್ಯಗಳನ್ನು ವಿವರಿಸಿದ ಅವರು, ಅಂಧ ಮಕ್ಕಳ ಅನುಕೂಲಕ್ಕಾಗಿ ನೂತನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ದಾನಿಗಳು ಹೆಚ್ಚಿನ ಸಹಾಯ ಮತ್ತು ಸಹಕಾರ ನೀಡಬೇಕು. ಅಂಧ ಮಕ್ಕಳ ಶಿಕ್ಷಣ, ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಅವರ ಸೇವೆಗೆ ಬದ್ಧರಾಗಬೇಕು ಎಂದು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಹಾಗೂ ಕರ್ನಾಟಕ ಅಂಧರ ಒಕ್ಕೂಟದ ವತಿಯಿಂದ ನ.೧೪ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಡಾ. ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಬಾಳ್ಳು ಗೋಪಾಲ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಎಂ. ಕೃಷ್ಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಬಿ.ಕೆ. ಮಂಜುನಾಥ್, ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರು ಉತ್ತಮ ಆಡಳಿತಗಾರರಾಗಿದ್ದರು. ಮಕ್ಕಳ ಮೇಲಿನ ಅವರ ಅಪಾರ ಪ್ರೀತಿ ಮತ್ತು ಕಾಳಜಿಯ ಸ್ಮರಣಾರ್ಥ ನವೆಂಬರ್‌ ೧೪ರಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಎಂ. ಕೃಷ್ಣ ಅಂಧ ಮಕ್ಕಳ ಶಾಲೆಯು ನಡೆದು ಬಂದ ಹಾದಿ ಹಾಗೂ ಸೇವಾ ಕಾರ್ಯಗಳನ್ನು ವಿವರಿಸಿದ ಅವರು, ಅಂಧ ಮಕ್ಕಳ ಅನುಕೂಲಕ್ಕಾಗಿ ನೂತನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ದಾನಿಗಳು ಹೆಚ್ಚಿನ ಸಹಾಯ ಮತ್ತು ಸಹಕಾರ ನೀಡಬೇಕು. ಅಂಧ ಮಕ್ಕಳ ಶಿಕ್ಷಣ, ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಅವರ ಸೇವೆಗೆ ಬದ್ಧರಾಗಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖಂಡ ಮರ್ಕುಲಿ ಗೋಪಾಲ್, ಪತ್ರಕರ್ತರಾದ ವೆಂಕಟೇಶ್ ಮತ್ತು ದರ್ಪಣ ಗೋಪಾಲ್, ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನ ಡಾ. ಶೃತಿ, ಡಾ. ಅಕ್ಕಮಹಾದೇವಿ, ಸ್ಕೈ ಇಂಟರ್‌ನ್ಯಾಷನಲ್ ಶಾಲೆಯ ಸ್ನೇಹ ಸತೀಶ್, ಪ್ರಜ್ವಲ್, ಶಿರೀನಾ, ಯತೀಶ್, ಮಹಾಲಕ್ಷ್ಮಿ, ಎಂ. ಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯ ಬಿ.ಎಲ್. ಗುರುಸ್ವಾಮಿ, ಸುಜೀತ್ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಸನದ ಸ್ಕೈ ಇಂಟರ್‌ನ್ಯಾಷನಲ್ ಶಾಲೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಇಂಡಿಯನ್ ಡೆಂಟಲ್ ಅಸೋಸಿಯೇಷನ್ ವತಿಯಿಂದ ಮಕ್ಕಳಿಗೆ ಸಿಹಿ ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.