ಹೊಸಕೋಟೆ: ನಗರದ ಹೊಸಕೋಟೆ ದಿ ಟೌನ್ ಕೋ ಆಪರೇಟಿವ್ ಬ್ಯಾಂಕಿಗೆ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆಯಾಗಿದ್ದಾರೆ.

ಹೊಸಕೋಟೆ: ನಗರದ ಹೊಸಕೋಟೆ ದಿ ಟೌನ್ ಕೋ ಆಪರೇಟಿವ್ ಬ್ಯಾಂಕಿಗೆ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಮಂಜುನಾಥ್ , ಬಿಜೆಪಿ ಬೆಂಬಲಿತ ಕಿರಣ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಕ್ಬರ್ ಪಾಷಾ, ಬಿಜೆಪಿ ಬೆಂಬಲಿತ ವೆಂಕಟಲಕ್ಷ್ಮಿ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆ ನಡೆದ ಸಂದರ್ಭದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತರ ಪಾಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಕ್ಬರ್ ಪಾಷಾ ತಲಾ ೮ ಮತ ಪಡೆದು ಆಯ್ಕೆಯಾದರು.

ನೂತನ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಯಾವುದೇ ಸಂಘ ಸಂಸ್ಥೆಗಳಲ್ಲಿ ರಾಜಕೀಯ ಮಾಡಬಾರದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 8, ಬಿಜೆಪಿ ಬೆಂಬಲಿತ 5 ಸದಸ್ಯರು ಆಯ್ಕೆಯಾಗಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಷೇರುದಾರರ ಸುರಕ್ಷೆ ಮತ್ತು ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ನೂತನ ಉಪಾಧ್ಯಕ್ಷ ಅಕ್ಬರ್ ಪಾಷಾ ಮಾತನಾಡಿ, ಟೌನ್ ಬ್ಯಾಂಕ್ ಚುನಾವಣೆ ಫೆಬ್ರವರಿಯಲ್ಲಿ ನಡೆದಿದ್ದು, ವಿರೋಧ ಪಕ್ಷದವರು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆ ಫಲಿತಾಂಶ ಪ್ರಕಟವಾಗುವುದು ವಿಳಂಬವಾಯಿತು. ಫಲಿತಾಂಶ ವಿಳಂಬವಾಗಿ 8 ಕಾಂಗ್ರೆಸ್ ಬೆಂಬಲಿತರು ಐದು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದರು. ಈಗ ಬ್ಯಾಂಕಿನಲ್ಲಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಲು ಶಾಸಕ ಶರತ್ ಬಚ್ಚೇಗೌಡರ ನಿರ್ದೇಶನದಂತೆ ಎಲ್ಲಾ ನಿರ್ದೇಶಕರು ಅವಕಾಶ ಕಲ್ಪಿಸಿದ್ದು ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿವಿ ಬೈರೇಗೌಡ, ಯೊಜನ ಪ್ರಾಧಿಕಾರದ ಅಧ್ಯಕ್ಷ ಕೇಶವಮೂರ್ತಿ, ಮಾಜಿ ಅಧ್ಯಕ್ಷ ಡಾ.ಸಿ.ಜಯರಾಜ್, ಟೌನ್ ಬ್ಯಾಂಕ್ ನೂತನ ನಿರ್ದೇಶಕರಾದ ವಿಷ್ಣು, ಗೋಪಾಲ, ಎನ್.ನಾಗರಾಜ್, ಮುರಳಿ, ಸರೋಜಮ್ಮ, ಕಿರಣ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಫೋಟೋ: 17 ಹೆಚ್ ಎಸ್ ಕೆ 3

ಹೊಸಕೋಟೆ ದಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಗೆ ಅಧ್ಯಕ್ಷರಾಗಿ ಮಂಜುನಾಥ್‌, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆಯಾಗಿದ್ದು ಶಾಸಕ ಶರತ್ ಬಚ್ಚೇಗೌಡ ಅಭಿನಂದಿಸಿದರು.