ಮಂಜುನಾಥ್‌ ಗೆಲವಿಗೆ ಸಹೋದರರಂತೆ ಕೆಲಸ ಮಾಡಿ

| Published : Mar 17 2024, 01:46 AM IST

ಮಂಜುನಾಥ್‌ ಗೆಲವಿಗೆ ಸಹೋದರರಂತೆ ಕೆಲಸ ಮಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕನಕಪುರ: ಪ್ರಪಂಚದ ಯಾವುದೇ ಶಕ್ತಿ ನಮ್ಮ ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶಾಸಕ ಮುನಿರತ್ನ ತಿಳಿಸಿದ್ದಾರೆ.

ಕನಕಪುರ: ಪ್ರಪಂಚದ ಯಾವುದೇ ಶಕ್ತಿ ನಮ್ಮ ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶಾಸಕ ಮುನಿರತ್ನ ತಿಳಿಸಿದ್ದಾರೆ.

ನಗರದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಡಾ.ಮಂಜುನಾಥ್ ಅವರು, ಸಮಾಜದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ವ್ಯಕ್ತಿ ನಮ್ಮ ಅಭ್ಯರ್ಥಿಯಾಗಿರುವುದು ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಹೆಚ್ಚಿನ ಶಕ್ತಿ ಬಂದಿದೆ. ಈ ಚುನಾವಣೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ್‌ ಅವರಿಗೆ ಅಧಿಕ ಮತ ದೊರೆಯುವ ವಿಶ್ವಾಸವಿದೆ, ಈ ಚುನಾವಣೆ ಜನತೆಗೆ ಧರ್ಮ ಯುದ್ಧ, ಮೈತ್ರಿ ಅಭ್ಯರ್ಥಿ ಮಂಜುನಾಥ್ ಅಧಿಕ ಬಹುಮತದಿಂದ ಗೆಲುವು ಸಾಧಿಸಿ ಕೇಂದ್ರದಲ್ಲಿ ಸಚಿವರಾಗುವುದು ಖಚಿತವೆಂದು ಭವಿಷ್ಯ ನುಡಿದರು.

ವಿಧಾನಪರಿಷತ್‌ ಸದಸ್ಯ ಸಿ.ಪಿ ಯೋಗೇಶ್ವರ್ ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಗಲಿರುಳೆನ್ನದೆ ನಿಷ್ಕಳಂಕ ಸೇವೆ ಸಲ್ಲಿಸಿ ಜನ ಮಾನಸದಲ್ಲಿ ಉಳಿದಿರುವ ಹೃದಯವಂತ ಡಾ.ಮಂಜುನಾಥ್ ಅವರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾಲ ಬದಲಾಗಿದ್ದು, ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಕೇಂದ್ರ ಸರ್ಕಾರದಲ್ಲಿ ಸಚಿವರಾಗುವುದು ನಿಶ್ಚಿತ ಎಂದರು.

ಯಾವುದೇ ಬೆದರಿಕೆ, ಸುಳ್ಳು ಕೇಸು ದಾಖಲಿಸುವಂತಹ ದಬ್ಬಾಳಿಕೆಗೆ ಎರಡೂ ಪಕ್ಷದ ಕಾರ್ಯಕರ್ತರು, ಮುಖಂಡರು ಹೆದರದೆ ತಾಲೂಕಿನ ಪ್ರತಿಯೊಂದು ಬೂತ್ ಮಟ್ಟದಲ್ಲಿ ನರೇಂದ್ರ ಮೋದಿ ಯವರ ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮನೆಯಲ್ಲಿ ಹಿರಿಯರಿಗೆ, ಪುರುಷರಿಗೆ, ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ತಿಳಿಸಿಕೊಡಬೇಕು. ಚನ್ನಪಟ್ಟಣ ತಾಲ್ಲೂಕಿನಲ್ಲಿ ನಮ್ಮ ಎರಡು ಪಕ್ಷಗಳ ಕಾರ್ಯಕರ್ತರ ಪಡೆಯಿಂದ ಕಾಂಗ್ರೆಸ್ಸಿಗೆ ಈ ಬಾರಿ ಠೇವಣಿಯೂ ಸಿಗುವುದು ಕಷ್ಟ ಎಂದು ಹೇಳಿದರು.

ಕನಕಪುರ ಗ್ರಾಮಾಂತರ ಮಂಡಲ ಅಧ್ಯಕ್ಷ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರು ಅಣ್ಣ-ತಮ್ಮಂದಿರಂತೆ ಇದ್ದು ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಅವರ ಗೆಲುವಿಗೆ ಬೆಂಬಲಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ನಿರ್ಮಲ್ ಕುಮಾರ್ ಸುರಾನಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ, ಜಿಲ್ಲಾ ರೈತ ಮೋರ್ಚಾ ಪ್ರ. ಕಾರ್ಯದರ್ಶಿ ನಾಗನಂದ, ರಾಮನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುರಳೀಧರ್, ಕನಕಪುರ ಪ್ರಾಧಿಕಾರ ಮಾಜಿ ಅಧ್ಯಕ್ಷ ಜಗನ್ನಾಥ್, ಗೌತಮ್ ಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ಚಿನ್ನಸ್ವಾಮಿ, ಜೆಡಿಎಸ್ ಯುವ ಮುಖಂಡ ಭರತ್ ಬಾಲನರಸಿಂಹಯ್ಯ ನಗರ ಮಂಡಲ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಎಸ್.ಟಿ. ಮೋರ್ಚಾದ ಡಿ.ಶ್ರೀನಿವಾಸ್, ಶಿವಮುತ್ತು, ಯುವ ಮೋರ್ಚಾ ಅಧ್ಯಕ್ಷ ಸುನೀಲ್, ಶೇಖರ್, ರಾಮಕೃಷ್ಣ, ಜೆಡಿಎಸ್, ಬಿಜೆಪಿ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು. ಕೆ ಕೆ ಪಿ ಸುದಿ 01ಕನಕಪುರದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆಯಲ್ಲಿ ಶಾಸಕ ಮುನಿರತ್ನ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯರಾದ ಸಿ.ಪಿ.ಯೋಗೇಶ್ವರ್, ನಿರ್ಮಲ್ ಕುಮಾರ್ ಸುರಾನಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆನಂದಸ್ವಾಮಿ ಇತರರಿದ್ದರು.