ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಂಘಕ್ಕೆ ಮಂಜುರಾಜು, ಲಲಿತಾ ಆಯ್ಕೆ

| Published : Mar 21 2025, 12:32 AM IST

ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಂಘಕ್ಕೆ ಮಂಜುರಾಜು, ಲಲಿತಾ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮದ್ದೂರು ತಾಲೂಕಿನ ಗೆಜ್ಜಲಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಮಂಜು ರಾಜು, ಉಪಾಧ್ಯಕ್ಷರಾಗಿ ಎಚ್.ಎಸ್.ಲಲಿತಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಗೆಜ್ಜಲಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಮಂಜು ರಾಜು, ಉಪಾಧ್ಯಕ್ಷರಾಗಿ ಎಚ್.ಎಸ್.ಲಲಿತಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುರಾಜ್, ಉಪಾಧ್ಯಕ್ಷ ಸ್ಥಾನಕ್ಕೆ ಲಲಿತಮ್ಮ ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಜಿ.ವಿ.ಮುತ್ತುರಾಜು ಅಂತಿಮವಾಗಿ ಪ್ರಕಟಿಸಿದರು.

ಬಳಿಕನೂತನ ಅಧ್ಯಕ್ಷ ಮಂಜುರಾಜ್ ಮಾತನಾಡಿ, ಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಲು ಮನ್ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ. ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಎನ್‌ಡಿಎ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಸಹಕಾರ ನೀಡಿದ್ದಾರೆ ಎಂದರು.

ಸಹಕಾರ ಸಂಘವನ್ನು ಪ್ರಸ್ತುತ ಇರುವ ಸ್ಥಿತಿಗಿಂತ ಹೆಚ್ಚಿನ ರೀತಿಯಲ್ಲಿ ಆರ್ಥಿಕ ಅಭಿವೃದ್ಧಿ ಸಾಧಿಸಲು ಸಹಕಾರ ನೀಡುವ ಜೊತೆಗೆ ರೈತರಿಗೆ ಕಾಲಕಾಲಕ್ಕೆ ಸಂಘದಿಂದ ಸಾಲ ಸೌಲಭ್ಯ, ರಸ ಗೊಬ್ಬರಗಳ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷರನ್ನು ನಿರ್ದೇಶಕರಾದ ಜಿ.ಬಿ.ಕೃಷ್ಣ ಅಲಿಯಾಸ್ ಡಾಬಾ ಕಿಟ್ಟಿ, ಶಿವಣ್ಣ, ಕೆ.ಪಿ. ಶ್ರೀಧರ. ಜಿ.ಎಸ್. ಪ್ರಕಾಶ್, ಜಿ.ಎನ್.ಶಿವಕುಮಾರ್, ಕೆ.ಎಸ್. ಹರೀಶ್, ಲಿಂಗಮ್ಮ, ಸರಿತಾ, ಜಿ.ಎಸ್. ಶ್ರೀಕಂಠ, ಜಿಲ್ಲಾ ಸಹಕಾರ ಬ್ಯಾಂಕ್ ಪ್ರತಿನಿಧಿ ಅರವಿಂದ, ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ.ಡಿ.ರಾಜೇಶ್, ಪೀ ಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಿದ್ದೇಗೌಡ, ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಗೆಜ್ಜಲಗೆರೆ ಮೋಹನ್, ಮುಖಂಡರಾದ ಸಂತೋಷ,ಶ್ರೀನಿವಾಸ,, ರಾಘವೇಂದ್ರ, ಆತ್ಮಾನಂದ, ಈರಪ್ಪ, ಕುದುರೆಗುಂಡಿ ನಾಗೇಶ ಮತ್ತಿತರು ಮಾಲಾರ್ಪಣೆ ಮಾಡಿ ಅಭಿನಂದಿಸಿದರು.