ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ತಂದಿದ್ದ ಮನಮೋಹನ್ ಸಿಂಗ್-ಸಂಸದ ಬೊಮ್ಮಾಯಿ

| Published : Dec 28 2024, 12:45 AM IST

ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ತಂದಿದ್ದ ಮನಮೋಹನ್ ಸಿಂಗ್-ಸಂಸದ ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾವೇರಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.ಮನಮೋಹನ್ ಸಿಂಗ್ ಅವರು ಅಂತಾರಾಷ್ಟ್ರೀಯ ಸಂಸ್ಥೆಗಳಾದ ವಿಶ್ವ ಸಂಸ್ಥೆ, ಐಎಂಎಫ್‌ನಲ್ಲಿ ಒಳ್ಳೆಯ ಸಂಪರ್ಕ ಇಟ್ಟುಕೊಂಡಿದ್ದರಿಂದ ಈ ದೇಶವನ್ನು ಉಳಿಸಲು ಸಾಧ್ಯವಾಯಿತು. ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿ ಕೆಲಸ ಮಾಡಿದ್ದು, ಈ ದೇಶದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಕಾರಣವಾಗಿದೆ. ದೇಶ ಆರ್ಥಿಕವಾಗಿ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಮನಮೋಹನ್ ಸಿಂಗ್ ಭದ್ರ ಬುನಾದಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.ಮನಮೋಹನ್ ಸಿಂಗ್ ಅವರು ಅತ್ಯಂತ ಸಜ್ಜನ ರಾಜಕಾರಣಿ ಆಗಿದ್ದರು. ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ದೇಶ ಕಳೆದುಕೊಂಡಿದೆ. ಅವರು ದೇಶಕ್ಕಾಗಿ ಸದಾ ಚಿಂತನೆ ಮಾಡುತ್ತಿದ್ದರು. ಹಲವಾರು ದೂರದೃಷ್ಟಿಯ ನಿರ್ಣಯಗಳನ್ನು ತೆಗೆದುಕೊಂಡಿದ್ದರು. ಅದರ ಲಾಭ ಈಗ ದೇಶಕ್ಕೆ ಆಗುತ್ತಿದೆ. ಅವರು ಪ್ರಚಾರ ಪ್ರಿಯ ರಾಜಕಾರಣ ಮಾಡಿರಲಿಲ್ಲ, ವಾಸ್ತವ ರಾಜಕಾರಣ ಮಾಡಿದ್ದರು. ಕೆಲವು ಅಪ್ರಿಯವಾದ ನಿರ್ಣಯಗಳನ್ನು ದೇಶದ ಹಿತ ದೃಷ್ಟಿಯಿಂದ ತೆಗೆದುಕೊಂಡಿದ್ದರು. ಅವರ ಗಟ್ಟಿ ನಿಲುವು, ಧೀಮಂತಿಕೆಯ ಗುಣ ಹಲವಾರು ಸಂದರ್ಭಗಳಲ್ಲಿ ಗೊತ್ತಾಗುತ್ತದೆ. ಭಾರತ ಚೀನಾ, ಅಮೇರಿಕಾ, ಯುರೋಪ್ ದೇಶಗಳಿಗೆ ಪೈಪೋಟಿ ಕೊಡಲು ಮನಮೋಹನ್ ಸಿಂಗ್ ಅವರು ಭದ್ರ ಬುನಾದಿ ಹಾಕಿದ್ದರು ಎಂದು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.