ಸಾರಾಂಶ
ಉದಯವಾಣಿಯಲ್ಲಿ ದೀರ್ಫಕಾಲ ಪತ್ರಕರ್ತರಾಗಿದ್ದ ಮನೋಹರ ಪ್ರಸಾದ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಂಗಳೂರು: ಕಾರ್ಯಕ್ರಮ ನಿರೂಪಕ, ತಾಳಮದ್ದಳೆ ಅರ್ಥಧಾರಿ, ಕತೆ- ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ (65) ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್‌ಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು.
ಅವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ನೆರವೇರಿತು.