ತರೀಕೆರೆ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ವರ್ಷಪೂರ್ತಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆದಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮತ್ತೆ ಪರೀಕ್ಷೆ ಎದುರಿಸುವುದು ಬಹಳ ಕಷ್ಟ. ಕೇಂದ್ರ ಸರ್ಕಾರ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಬಗ್ಗೆ ಚೆಲ್ಲಾಟ ಆಡುತ್ತಿರುವುದು ಖಂಡನೀಯ ಎಂದು ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮನೋಜ್ ಕೆ. ಹೇಳಿದರು.

ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ನಿಂದ ಶನಿವಾರ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನೀಟ್ ಪ್ರಶ್ನೆ ಪತ್ರಿಕೆ

ಸೋರಿಕೆ. ಬೆಲೆ ಏರಿಕೆ, ದಿನ ಬಳಕೆ ವಸ್ತುಗಳಾದ ಗ್ಯಾಸ್, ಪೆಟ್ರೋಲ್.ಡೀಸಲ್ ಬೆಲೆ ಏರಿಕೆ ಕೇಂದ್ರ ಸರ್ಕಾರದ ವೈಫಲ್ಯದ ಕುರಿತು ನಡೆದ ಪ್ರತಿಭಟನೆಯಲ್ಲಿ ಮಾತನಾಡಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ನೇರ ಹೊಣೆ ಯಾಗುತ್ತಾರೆ, ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್, ಡೀಸಲ್ ಮತ್ತು ಗ್ಯಾಸ್ ಇತ್ಯಾದಿ ದಿನ ಬಳಕೆ ವಸ್ತುಗಳ ಬೆಲೆ ಏರಿಸುತ್ತಿರುವುದು ಖಂಡನೀಯ. ದೇಶದ ನಾಗರಿಕರು ವಿದೇಶ ಪ್ರವಾಸ ಕಡಿಮೆ ಮಾಡಬೇಕು ಎಂದು ಹೇಳಿ, ದೇಶ ಸಂಕಷ್ಟ ಪರಿಸ್ಥಿತಿಯಲ್ಲಿರುವಾಗ ಪ್ರಧಾನ ಮಂತ್ರಿ ವಿದೇಶ ಪ್ರವಾಸ ಕೈಗೊಂಡಿದ್ದು ಸರಿಯಲ್ಲ ಎಂದರು.


ಶಾಸಕ ಜಿ.ಎಚ್.ಶ್ರೀನಿವಾಸ್, ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಜಿತ್ ಗೌಡ, ತರೀಕೆರೆ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಧವನ್ ರಾಜ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಾಲಾಜಿ, ಚಂದ್ರಾನಾಯ್ಕ, ಪ್ರಚಾರ ಸಮಿತಿ ಉಪಾಧ್ಯಕ್ಷ ಮಹಮದ್ ಯಾಸೀನ್, ಅಜ್ಜಂಪುರ ಪಟ್ಟಣ ಪಂಚಾಯಿತಿ ಸದಸ್ಯ ನಿಸಾರ್ ಅಹಮದ್. ಸಂತೋಷ್, ರತನ್, ರವಿ, ಅಕ್ಷಯ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.--

23ಕೆಟಿಆರ್.ಕೆ.4ಃ ತರೀಕೆರೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಏರ್ಪಡಿಸಲಾಗಿತ್ತು.