ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್‌ಗೆ

| Published : Nov 22 2023, 01:00 AM IST

ಸಾರಾಂಶ

ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್‌ಗೆ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಿಜೆಪಿಯ ಕೆಲ ರಾಷ್ಟ್ರೀಯ ನಾಯಕರು ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್‌ಗೆ ಬರಲಿದ್ದಾರೆ. ರಾಜ್ಯದಲ್ಲೂ ಬಹಳಷ್ಟು ಜನ ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಬರಲಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಸಹ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಬೀಳುವುದಿಲ್ಲ. ಬದಲಿಗೆ ಕೇಂದ್ರದಲ್ಲಿಯೂ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೇಂದ್ರದಲ್ಲೂ ನಮ್ಮ ಸರ್ಕಾರವೇ ರಚನೆಯಾಗಿ, ನಮ್ಮ ಸರ್ಕಾರ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ಹಾಗೂ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು, ನಾಯಕರ ನಿರ್ಧಾರವೇ ಅಂತಿಮ. ಅಭಿಮಾನಕ್ಕೆ ಅವರು ಸಿಎಂ ಆಗಬೇಕು, ಇವರು ಸಿಎಂ ಆಗಬೇಕು ಎಂದು ಕೆಲ ಶಾಸಕರು ಅಭಿಪ್ರಾಯ ಹೇಳುತ್ತಾರೆಂಬುದು ನಿಜ. ಆದರೆ, ನಮ್ಮಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.