ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಅಭಿವೃದ್ಧಿಯನ್ನು ಮೆಚ್ಚಿ ಜೈನಾಪುರ ಗ್ರಾಮದ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿಕಾಂಗ್ರೆಸ್ ಪಕ್ಷದ ಸಿದ್ಧಾಂತ, ಅಭಿವೃದ್ಧಿಯನ್ನು ಮೆಚ್ಚಿ ಜೈನಾಪುರ ಗ್ರಾಮದ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಪಟ್ಟಣದ ಕವಟಗಿಮಠ ನಗರದ ಸ್ವಗೃಹದಲ್ಲಿ ರಾಯಬಾಗ ತಾಲೂಕಿನ ಜೈನಾಪುರ ಗ್ರಾಮದ 20ಕ್ಕೂ ಹೆಚ್ಚು ಜನರಿಗೆ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ನೀವೆಲ್ಲರೂ ಸೇರಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜೈನಾಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಭೀಮಾ ತಳವಾರ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ನಾವೆಲ್ಲರೂ ಸ್ವತಂತ್ರ ಅಭ್ಯರ್ಥಿಗೆ ಬೆಂಬಲ ನೀಡಿದ್ದವು. ಆದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೈನಾಪುರ ಗ್ರಾಮ ಪಂಚಾಯತಿ ಸದಸ್ಯರಾದ ಬಾಲಾಜಿ ಲಚ್ಚೆಪ್ಪಗೊಳ್ಳ, ಅಜೀತ್ ನಾಗರಾಜ ಸೇರಿದಂತೆ ಜೈನಾಪುರ ಗ್ರಾಮದ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.