ಸಾರಾಂಶ
ಅಳಿವಿನಂಚಿನಲ್ಲಿರುವ ಜೀವ ಸಂಕುಲಗಳನ್ನು ರಕ್ಷಿಸಿ ಉಳಿಸಬೇಕಾದರೆ ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳು ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಜೊತೆಗೆ ಈ ಬಗ್ಗೆ ಪೋಷಕರಲ್ಲಿಯೂ ಅರಿವು ಮೂಡಿಸಬೇಕು.
ಕನ್ನಡಪ್ರಭ ವಾರ್ತೆ ನಾಗಮಂಗಲ
ಪರಿಸರ ನಾಶದ ಜೊತೆಗೆ ಹೆಚ್ಚಾಗುತ್ತಿರುವ ಪ್ಲಾಸ್ಟಿಕ್, ವಾಯು ಮತ್ತು ಜಲ ಮಾಲಿನ್ಯದಿಂದ ನಾವು ಅನೇಕ ಸಮಸ್ಯೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರವನ್ನು ಶಾಶ್ವತವಾಗಿ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಹಸೀಲ್ದಾರ್ ಜಿ.ಆದರ್ಶ ಹೇಳಿದರು.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಸ್ತಿತ್ವಕ್ಕೆ ಬಂದು 50 ವರ್ಷ ಕಳೆದು ಸುವರ್ಣ ಮಹೋತ್ಸವ ಆಚರಣೆ ಪ್ರಯುಕ್ತ ತಾಲೂಕು ಆಡಳಿತದಿಂದ ಪಟ್ಟಣದಲ್ಲಿ ಆಯೋಜಿಸಿದ್ದ ಪರಿಸರ ಸಂರಕ್ಷಿಸುವ ಕುರಿತು ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಕಲುಶಿತಗೊಳ್ಳುತ್ತಿರುವ ಮಾಲಿನ್ಯ ನಿಯಂತ್ರಿಸಿ ಪರಿಸರ ಉಳಿಸಿದರೆ ಮಾತ್ರ ನಾವು ಮತ್ತು ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬದುಕಬಹುದು. ಅಳಿವಿನಂಚಿನಲ್ಲಿರುವ ಜೀವ ಸಂಕುಲಗಳನ್ನು ರಕ್ಷಿಸಿ ಉಳಿಸಬೇಕಾದರೆ ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳು ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಜೊತೆಗೆ ಈ ಬಗ್ಗೆ ಪೋಷಕರಲ್ಲಿಯೂ ಅರಿವು ಮೂಡಿಸಬೇಕು. ಹಾಗಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.ಅರಣ್ಯ ನಾಶ ಮಾಡಿದರೆ ಮುಂದೊಂದು ದಿನ ನಾವು ಕುಡಿಯುವ ನೀರಿಗೂ ಪರಿತಪಿಸಬೇಕಾಗುತ್ತದೆ. ಗಿಡ ಮರಗಳಿಂದ ನಾವು ಎಲ್ಲ ರೀತಿಯಲ್ಲೂ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದೇವೆ. ಕಡಿದ ಮರದ ಬದಲಿಗೆ ಮತ್ತೊಂದು ಸಸಿ ನೆಡುವುದನ್ನು ಮರೆಯುತ್ತಿದ್ದೇವೆ ಎಂದು ಎಚ್ಚರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್ ಮಾತನಾಡಿದರು. ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಿಂದ ತಾಲೂಕು ಆಡಳಿತ ಸೌಧದ ವರೆಗೂ ಜಾಥಾ ನಡೆಸಿದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪರಿಸರ ಉಳಿಸಿ, ಪ್ಲಾಸ್ಟಿಕ್ ತ್ಯಜಿಸಿ ಎಂಬ ಘೋಷಣೆಯುಳ್ಳ ನಾಮಫಲಕ ಹಿಡಿದು ಜನರಲ್ಲಿ ಅರಿವು ಮೂಡಿಸಿದರು.ಈ ವೇಳೆ ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್, ತಾಲೂಕು ಕಚೇರಿ ಶಿರಸ್ತೇದಾರ್ ಉಮೇಶ್, ಕಂದಾಯ ನಿರೀಕ್ಷಕ ರಂಗಸ್ವಾಮಿ, ಯೋಗೇಶ್ ಸೇರಿದಂತೆ ಹಲವರು ಇದ್ದರು.
;Resize=(128,128))
;Resize=(128,128))
;Resize=(128,128))