ಕಟ್ಟಡ ಕಾರ್ಮಿಕರ ಅಭಿವೃದ್ದಿಗೆ ಹಲವು ಯೋಜನೆಗಳು ಜಾರಿ: ಶಾಸಕ ಷಡಕ್ಷರಿ

| Published : Jan 25 2024, 02:04 AM IST

ಕಟ್ಟಡ ಕಾರ್ಮಿಕರ ಅಭಿವೃದ್ದಿಗೆ ಹಲವು ಯೋಜನೆಗಳು ಜಾರಿ: ಶಾಸಕ ಷಡಕ್ಷರಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಕೂಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ರಾಜ್ಯ ಸರ್ಕಾರ ಕೂಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ನಗರದ ಸರ್ಕಾರಿ ನಿವೃತ್ತ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ ತಾಲೂಕು ಘಟಕದಿಂದ ಆಯೋಜಿಸಿದ್ದ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರು ಇತರರಂತೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕಿದ್ದು ಈ ನಿಟ್ಟಿನಲ್ಲಿ ಅವರಿಗೆ ಗುರುತಿನ ಕಾರ್ಡ್ ಅವಶ್ಯಕವಾಗಿದ್ದು ಕಾರ್ಮಿಕರು ಈ ಕಾರ್ಡ್‌ನ್ನು ಉಪಯೋಗಿಸಿಕೊಂಡು ಸರ್ಕಾರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಸಂಘದ ರಾಜ್ಯಾಧ್ಯಕ್ಷ ಸತ್ಯನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ್ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು. ಸಂಘದ ತುಮಕೂರು ಜಿಲ್ಲಾಧ್ಯಕ್ಷ ಸರ್ವೇಶ್ ಮಾತನಾಡಿ, ಇಲ್ಲಿನ ಕಾರ್ಮಿಕ ಇಲಾಖೆಯಲ್ಲಿ ಯಾವುದೇ ರೀತಿ ಮೂಲಭೂತ ಸೌಕರ್ಯಗಳಿಲ್ಲ. ಅತಿ ಚಿಕ್ಕ ಜಾಗದಲ್ಲಿ ನಮ್ಮ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು ಇಲಾಖೆಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಶಾಸಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮಕ್ಕಳಿಗೆ ನೋಟ್‌ಬುಕ್ ವಿತರಣೆ ಹಾಗೂ ಕಾರ್ಮಿಕರಿಗೆ ಗುರುತಿನ ಕಾರ್ಡ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ತಾ. ಗೌರವಾಧ್ಯಕ್ಷ ಸಿದ್ದಯ್ಯ, ಉಪಾಧ್ಯಕ್ಷ ಬಿ.ಬಿ. ಸಿದ್ದಲಿಂಗಮೂರ್ತಿ, ಜಿಲ್ಲಾ ಕಾರ್ಯದರ್ಶಿ ಧರಣೇಶ್, ಹರೀಶ್, ರೈತಕವಿ ಶಂಕರಪ್ಪ, ಭಾಸ್ಕರ್, ಸೋಮಶೇಖರ್, ಪರಮೇಶ್, ಗಂಗಾಧರಯ್ಯ ಸೇರಿದಂತೆ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಿದ್ದರು.