ಹಾರೋಹಳ್ಳಿ: ತಾಲೂಕಿನ ದೊಡ್ಡಮುದುವಾಡಿ ಗ್ರಾಮದಲ್ಲಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸರ್ಕಾರಿ ನಕಾಶೆ ರಸ್ತೆಯನ್ನು ತಹಸೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಯಿತು
ಹಾರೋಹಳ್ಳಿ: ತಾಲೂಕಿನ ದೊಡ್ಡಮುದುವಾಡಿ ಗ್ರಾಮದಲ್ಲಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸರ್ಕಾರಿ ನಕಾಶೆ ರಸ್ತೆಯನ್ನು ತಹಸೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.
ಗ್ರಾಮದ ಸರ್ಕಾರಿ ನಕಾಶೆ ರಸ್ತೆಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ತಹಸೀಲ್ದಾರ್ ಹರ್ಷವರ್ಧನ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಗೆ ಚಾಲನೆ ನೀಡಿದರು.ರಸ್ತೆಯ ಎರಡೂ ಬದಿಯ ಜಮೀನು ಮಾಲೀಕರ ನಡುವಿನ ವೈಯಕ್ತಿಕ ವಿಚಾರಗಳಿಂದಾಗಿ ರಸ್ತೆ ತೆರವು ಕಾರ್ಯಕ್ಕೆ ಅಡ್ಡಿಯಾಗಿತ್ತು. ಎರಡು ಗುಂಪುಗಳ ನಡುವೆ ಇದ್ದ ಜಿದ್ದಾಜಿದ್ದಿ ಮತ್ತು ವೈಮನಸ್ಸನ್ನು ನಿವಾರಿಸಲು ತಹಸೀಲ್ದಾರ್ ಮಾತುಕತೆ ನಡೆಸಿ, ಎರಡೂ ಕಡೆಯವರ ಮನವೊಲಿಸಿದರು. ಬಳಿಕ ಎಂಟು ಅಡಿ ಅಗಲದ ನಕಾಶೆ ರಸ್ತೆಯನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಬಹುಕಾಲದ ಬೇಡಿಕೆಗೆ ಸ್ಪಂದಿಸಿ ರಸ್ತೆ ತೆರವುಗೊಳಿಸಿದ ತಹಸೀಲ್ದಾರ್ ಹರ್ಷವರ್ಧನ್ ಹಾಗೂ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.ಚಿಕ್ಕಮುದುವಾಡಿ ಸೈಯದ್ ಸಜ್ಜನ್, ಗ್ರಾಮಸ್ಥರಾದ ಮಹೇಶ್, ಪರಮೇಶ್, ನರಸಿಂಹಮೂರ್ತಿ, ಬೈರೇಗೌಡ, ನಾಗರಾಜು, ಮುನಿರಾಜು, ಬಾಬು, ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು.30ಕೆಆರ್ ಎಂಎನ್ 7.ಜೆಪಿಜಿ
ಹಾರೋಹಳ್ಳಿ ತಾಲೂಕಿನ ದೊಡ್ಡಮುದುವಾಡಿ ಗ್ರಾಮದಲ್ಲಿ ನೆನೆಗುದಿಗೆ ಬಿದ್ದಿದ್ದ ಸರ್ಕಾರಿ ನಕಾಶೆ ರಸ್ತೆಯನ್ನು ತಹಸೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.