ಡೆಂಘೀ ನಿಯಂತ್ರಣಕ್ಕೆ ಮರತೂರಕರ್ ಒತ್ತಾಯ

| Published : Jul 11 2024, 01:30 AM IST

ಡೆಂಘೀ ನಿಯಂತ್ರಣಕ್ಕೆ ಮರತೂರಕರ್ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಡೆಂಘೀ ಸೇರಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲೆಯಲ್ಲಿ ಡೆಂಘೀ ಸೇರಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಪ್ರತಿ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ ರೋಗಗಳು ಜನತೆಯನ್ನು ಬಾಧಿಸುವುದು ಸರ್ವೇ ಸಾಮಾನ್ಯ. ಈ ಬಾರಿ ಮಳೆ ಬೀಳುತ್ತಿದಂತೆ ಡೆಂಘೀ ಹಾವಳಿ ಹೆಚ್ಚಾಗಿದೆ. ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಜಿಲ್ಲಾಡಳಿತ ಮಳಗಾಲ ಎದುರಿಸಲು ಮತ್ತು ಆರೋಗ್ಯ ಸುರಕ್ಷಾ ಕ್ರಮಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಡೆಂಘೀ ಗಳಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಕೈಗೊಳ್ಳುವ ಬಗ್ಗೆ ಮತ್ತು ರೋಗ ತಡೆಗಟ್ಟಲು ಅಗತ್ಯ ಕ್ರಮಗಳ ಬಗ್ಗೆ ಜನತೆಗೆ ಮುನ್ನೆಚ್ಚರಿಕೆ ಕ್ರಮ ತಿಳಿಸಬೇಕಿತ್ತು. ನೀರು ನಿಲ್ಲುವ ರಸ್ತೆ, ತಗ್ಗು ಪ್ರದೇಶಗಳಲ್ಲಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.

ಸರಕಾರ ಡೆಂಘೀ ಪರೀಕ್ಷೆ ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಪರೀಕ್ಷಾ ದರಗಳನ್ನು ನಿಗದಿಗೊಳಿಸಿದೆ‌. ಆದರೆ ಡೆಂಘೀ ಪತ್ತೆಯಾದ ರೋಗಿಗಳಿಗೆ ಆಸ್ಪತ್ರೆಯ ಚಿಕಿತ್ಸೆಯ ದರ ಮತ್ತು ವೈದ್ಯರು ವಿಧಿಸುವ ಶುಲ್ಕದ ಬಗ್ಗೆ ಪ್ರಸ್ತಾಪಗಳಿಲ್ಲ. ಖಾಸಗಿ ಆಸ್ಪತ್ರೆಗಳು ರೋಗದ ಹೆಸರಲ್ಲಿ ನಿಗದಿತ ದರಗಳಿಗಿಂತಲೂ ಹೆಚ್ಚಿನ ಲೂಟಿ ನಡಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.