21ರಂದು ಕಾಡಾನೆ ನಿಯಂತ್ರಣಕ್ಕೆ ಒತ್ತಾಯಿಸಿ ಮೆರವಣಿಗೆ

| Published : Jul 20 2025, 01:20 AM IST

21ರಂದು ಕಾಡಾನೆ ನಿಯಂತ್ರಣಕ್ಕೆ ಒತ್ತಾಯಿಸಿ ಮೆರವಣಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂದು ಬೆಳಗ್ಗೆ ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಆರಂಭಿಸಿ ಮೂರುಮಾರ್ಗದ ಮೂಲಕ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯ ವರೆಗೆ ಸಾಗಿ ಬಂದು ಮನವಿ ಸಲ್ಲಿಸಲಾಗುವುದು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತೀವ್ರವಾಗಿದ್ದು, ಕೃಷಿಕರು ಆತಂಕ ಪಡುವಂತಹ ವಾತಾವರಣವಿದೆ. ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು,‌ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕೆಎಸ್‌ಎಂಸಿಎ ವತಿಯಿಂದ ಜುಲೈ 21ರಂದು ಬೆಳ್ತಂಗಡಿಯಲ್ಲಿ ಮೆರವಣಿಗೆ ನಡೆಸಿ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕೆಎಸ್‌ಎಂಸಿಎ ಅಧ್ಯಕ್ಷ ಬಿಟ್ಟಿ ನೆಡುನಿಲಂ ತಿಳಿಸಿದ್ದಾರೆ.ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ತಾಲೂಕಿನ ಮಲೆನಾಡಿನ ಭಾಗಗಳಲ್ಲಿ ಕಾಡಾನೆ ಹಾವಳಿ ತೀರಾ ಹೆಚ್ಚಾಗಿದೆ. ಕೃಷಿಕರು ತಮ್ಮ ತೋಟಗಳಿಗೆ ತೆರಳಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಶಾಸಕ ಹರೀಶ್ ಪೂಂಜ ಅವರನ್ನು ಈ ಬಗ್ಗೆ ಮಾತನಾಡಿಸಿದ್ದು, ಅವರು ಅದೇ ದಿನ ಬಂದು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುವುದಾಗಿ ತಿಳಿಸಿದ್ದಾರೆ. ಅವರಿಗೂ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅಂದು ಬೆಳಗ್ಗೆ ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಆರಂಭಿಸಿ ಮೂರುಮಾರ್ಗದ ಮೂಲಕ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯ ವರೆಗೆ ಸಾಗಿ ಬಂದು ಮನವಿ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ., ಪಿಆರ್‌ಒ ಸೆಬಾಸ್ಟಿಯನ್‌ ಪಿ.ಸಿ., ಯುವ ಘಟಕದ ಸಂಚಾಲಕ ರೋಬಿನ್ ಓಡಂಪಳ್ಳಿ, ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ ಉಪಸ್ಥಿತರಿದ್ದರು.