ಬಂಗಾರಪೇಟೆ: ಪಟ್ಟಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ ಪೊಲೀಸರು, ಒಡಿಸ್ಸಾ ಮೂಲದ ಓರ್ವ ಆರೋಪಿಯನ್ನು ಬಂಧಿಸಿ ಸುಮಾರು 1.75 ಲಕ್ಷ ರು. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಒಡಿಸ್ಸಾ ರಾಜ್ಯ ಗಜಪತಿ ಜಿಲ್ಲೆಯ ಸಿಮನ್ ಸಬರ್ ಆರೋಪಿಯಿಂದ 3 ಕೆ.ಜಿ 180 ಗ್ರಾಂ ಗಾಂಜಾ ಅಂದಾಜು ಮೌಲ್ಯ ರು. 1,75,000 ಒಂದು ಬ್ಯಾಗ್ ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಇನ್‌ಸ್ಪೆಕ್ಟರ್ ರವಿಕುಮಾರ್ ಹಾಗೂ ತಂಡವು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ.