ಸಾರಾಂಶ
ಆಟೋದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ವರದಿಯಾಗಿದೆ.
ಕನ್ನಡಪ್ರಭ ವಾರ್ತೆ ತುರುವೇಕೆರೆ
ಆಟೋದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ವರದಿಯಾಗಿದೆ. ಅಕ್ರಮವಾಗಿ ಗಾಂಜಾವನ್ನು ಆಟೋದಲ್ಲಿ ತುರುವೇಕೆರೆ ಕಡೆಗೆ ಸಾಗಾಟ ಮಾಡಲಾಗುತ್ತಿದೆ ಎಂದು ಬಂದ ಸುಳಿವನ್ನು ಆಧರಿಸಿ ಅಬಕಾರಿ ಅಧಿಕಾರಿಗಳು ಇಲ್ಲಿಯ ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರ ಬಳಿ ಬರುತ್ತಿದ್ದ ಆಟೋವನ್ನು ಪರಿಶೀಲನೆ ಮಾಡಲಾಗಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಈ ವೇಳೆ ಆಟೋದಲ್ಲಿದ್ದ ಸುಮಾರು ೬.೨೦೦ ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ ಹಾಗೂ ಒರಿಸ್ಸಾ ಮೂಲದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ತಿಪಟೂರು ಉಪ ವಿಭಾಗಾಧಿಕಾರಿ ವಿಜಯಕುಮಾರ್, ಅಬಕಾರಿ ಅಧಿಕಾರಿಗಳಾದ ದಿಲಿಪ್ ಕುಮಾರ್, ಗಂಗರಾಜು, ಮಂಜುನಾಥ್ ಸೇರಿ ಸಿಬ್ಬಂದಿಗಳು ಇದ್ದರು.