ಶಿಕ್ಷಕರ ಸಮಸ್ಯೆ ನಿವಾರಿಸುವಲ್ಲಿ ಮರಿತಿಬ್ಬೇಗೌಡರು ಪ್ರಮುಖ ಪಾತ್ರ: ಎನ್.ಚಲುವರಾಯಸ್ವಾಮಿ

| Published : May 31 2024, 02:17 AM IST

ಶಿಕ್ಷಕರ ಸಮಸ್ಯೆ ನಿವಾರಿಸುವಲ್ಲಿ ಮರಿತಿಬ್ಬೇಗೌಡರು ಪ್ರಮುಖ ಪಾತ್ರ: ಎನ್.ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಕರು ಮತ್ತು ಉಪನ್ಯಾಷಕರು, ಪ್ರಾಂಶುಪಾಲರ ಹಲವಾರು ಕುಂದುಕೊರತೆಗಳ ಬಗ್ಗೆ ಸ್ಪಂದಿಸುವ ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯ ಮತನ್ನು ಕೊಟ್ಟು ಗೆಲ್ಲಿಸಲು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ಭೇಟಿ ಕೊಟ್ಟು ಶಿಕ್ಷಕರನ್ನು ಮನವೊಲಿಸುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿಕ್ಷಕರು ಮಾಡಬೇಕಿದೆ.

ಕನ್ನಡಪ್ರಭ ವಾರ್ತೆ ಭಾರತೀನಗರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು ಶಿಕ್ಷಕರ ಸಮಸ್ಯೆ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಭಾರತೀ ಕಾಲೇಜಿನ ಕ್ಯಾಂಪಸ್‌ನಲ್ಲಿ ಮರಿತಿಬ್ಬೇಗೌಡರ ಪರ ಪ್ರಚಾರ ನಡೆಸಿ ನಂತರ ಕುವೆಂಪು ಸಭಾಂಗಣದಲ್ಲಿ ಶಿಕ್ಷಕರನ್ನು ಕುರಿತು ಮಾತನಾಡಿ, ಸತತ ನಾಲ್ಕು ಭಾರಿ ಶಿಕ್ಷಕರ ಕ್ಷೇತ್ರದಿಂದಲೇ ಆಯ್ಕೆಯಾಗಿರುವ ಮರಿತಿಬ್ಬೇಗೌಡರು, ಶಿಕ್ಷಕರ ಜೊತೆಯಲ್ಲಿಯೇ ಇದ್ದು ಕಷ್ಟ ಸುಖಗಳನ್ನು ಅರ್ಥ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಸೂಕ್ತ ಅಭ್ಯರ್ಥಿಯನ್ನು ಆಯ್ಕೆಮಾಡಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ರಾಜ್ಯದ ಜನತೆಗೆ ನೀಡಿದ್ದೇವೆ. ಮತದಾರ ಶಿಕ್ಷಕರುರು ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ಕೊಟ್ಟು ಗೆಲ್ಲಿಸಿ ಮತ್ತಷ್ಟು ಸೇವೆ ಮಾಡುವ ಅವಕಾಶವನ್ನು ಕಲ್ಪಿಸಬೇಕು. ಶಿಕ್ಷಕರ ಋಣ ತೀರಿಸುವ ಜವಾಬ್ದಾರಿಯಲ್ಲಿ ಪ್ರಾಮಾಣೀಕವಾಗಿ ಸೇವೆ ಸಲ್ಲಿಸುವರು ಎಂದರು.

ನಾನು ಜಿಲ್ಲಾರುಸ್ತುವಾರಿ ಮಂತ್ರಿಯಾಗಿ ಸಮಸ್ಯೆಯ ಹಾಲಿಸಬಹುದು. ಆದರೆ, ಶಿಕ್ಷಕರ ಸಮಸ್ಯೆಯನ್ನು ಅಂತರಾಳದಿಂದ ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೊಂಡ ಶಾಸಕರಿಂದಲೇ ಸಾಧ್ಯ ಎಂದರು.

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ಶಿಕ್ಷಕರು ಮತ್ತು ಉಪನ್ಯಾಷಕರು, ಪ್ರಾಂಶುಪಾಲರ ಹಲವಾರು ಕುಂದುಕೊರತೆಗಳ ಬಗ್ಗೆ ಸ್ಪಂದಿಸುವ ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯ ಮತನ್ನು ಕೊಟ್ಟು ಗೆಲ್ಲಿಸಲು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ಭೇಟಿ ಕೊಟ್ಟು ಶಿಕ್ಷಕರನ್ನು ಮನವೊಲಿಸುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿಕ್ಷಕರು ಮಾಡಬೇಕಿದೆ ಎಂದರು.

ಮರಿತಿಬ್ಬೇಗೌಡರು ಶಿಕ್ಷಕರೊಂದಿಗೆ ನಿಕಟ ಸಂಪರ್ಕ ಹೊಂದುವ ಜೊತೆಗೆ ರೈತರು ಹಾಗೂ ಜಿಲ್ಲೆಯ ಸಾಮಾಜಿಕ ಸಮಸ್ಯೆಗಳ ಬಗ್ಗೆ ಗಮನ ಸೆಳೆದು ಅವುಗಳ ಪರಿಹಾರ ದೊರಕಿಸಲು ಹೋರಾಡಿದ್ದಾರೆ ಎಂದರು.

ಇದೇ ವೇಳೆ ಭಾರತೀ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಬಿ.ಎಂ.ನಂಜೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಶಿವಲಿಂಗೇಗೌಡ, ತಾಪಂ ಮಾಜಿ ಸದಸ್ಯ ಗಿರೀಶ್, ಮುಖಂಡರಾದ ಸಿದ್ದಪ್ಪ, ಅಮರ್‌ಬಾಬು, ಪಣ್ಣೇದೊಡ್ಡಿ ಹರ್ಷ ಸೇರಿದಂತೆ ಹಲವರಿದ್ದರು.