'5 ನೇ ಬಾರಿಯೂ ಮರಿತಿಬ್ಬೇಗೌಡ್ರ ಗೆಲುವು ಗ್ಯಾರಂಟಿ'

| Published : May 30 2024, 12:56 AM IST / Updated: May 30 2024, 11:58 AM IST

ಸಾರಾಂಶ

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮತಯಾಚನೆ ನಡೆಸಿ, ಮೊದಲ ಪ್ರಾಶಸ್ತ್ಯ ಮತ ನೀಡಬೇಕು ಎಂದು ಶಿಕ್ಷಕರಲ್ಲಿ ಮತಯಾಚಿಸಿದರು.

 ಗುಂಡ್ಲುಪೇಟೆ : ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮತಯಾಚನೆ ನಡೆಸಿ, ಮೊದಲ ಪ್ರಾಶಸ್ತ್ಯ ಮತ ನೀಡಬೇಕು ಎಂದು ಶಿಕ್ಷಕರಲ್ಲಿ ಮತಯಾಚಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಹುಂಡಿ ಭೋಗಪ್ಪ ಕಾಲೇಜು, ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜು, ಮದ್ದಾನೇಶ್ವರ ಶಾಲೆ, ಗೌತಮ ಹಾಗೂ ಜವಾಹರ್‌ ಶಿಕ್ಷಣ ಸಂಸ್ಥೆ ಹಾಗೂ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮತಯಾಚನೆ ಸಮಯದಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮಾತನಾಡಿ, ಮರಿತಿಬ್ಬೇಗೌಡರು ನಾಲ್ಕು ಬಾರಿ ಗೆದ್ದಿದ್ದಾರೆ, ಐದನೇ ಬಾರಿಯೂ ಗೆಲುವು ಸಾಧಿಸಲು ಶಿಕ್ಷಕ ಮತದಾರರು ಮೊದಲ ಪ್ರಾಶಸ್ತ್ಯ ಮತ ನೀಡಬೇಕು ಎಂದು ಮನವಿ ಮಾಡಿದರು. ಮರಿತಿಬ್ಬೇಗೌಡರು ಈ ಬಾರಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. 

ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಮಯದಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದಾರೆ. ಈ ಬಾರಿ ಆಯ್ಕೆ ಮಾಡುವ ಮೂಲಕ ವಿಧಾನ ಪರಿಷತ್‌ಗೆ ಕಳುಹಿಸಿ ಕೊಡಿ ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದು, ಶಿಕ್ಷಕರ ಸಮಸ್ಯೆಗಳನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವರಿಕೆ ಮಾಡುವ ಮೂಲಕ ನಿಮ್ಮ ಸಮಸ್ಯೆಗೆ ನಾನು ಕೂಡ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಮತಯಾಚನೆ ಸಂದರ್ಭದಲ್ಲಿ ಶಾಸಕರೊಂದಿಗೆ ಮಾಜಿ ಸಂಸದ ಎ.ಸಿದ್ದರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್‌, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್‌, ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್‌, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಪುರಸಭೆ ಮಾಜಿ ಉಪಾಧ್ಯಕ್ಷ ಎಸ್ಆರ್‌ಎಸ್‌ ರಾಜಶೇಖರ್‌, ಕಾಂಗ್ರೆಸ್‌ ಮುಖಂಡರಾದ ಬಿ.ಕುಮಾರಸ್ವಾಮಿ, ಪುರಸಭೆ ಸದಸ್ಯರಾದ ಅಣ್ಯಯ್ಯಸ್ವಾಮಿ, ಗೌಡ್ರ ಮಧು, ಕಮರಹಳ್ಳಿ ಕುಮಾರ್‌, ಗೋಪಾಲಪುರ ಲೋಕೇಶ್‌, ವೀರನಪುರ ಲೋಕೇಶ್‌ ಇದ್ದರು.