ಜಿಲ್ಲೆಯ ಹಲವೆಡೆ ಹುತಾತ್ಮರ ದಿನಾಚರಣೆ, ಮೌನಾಚರಣೆ

| Published : Jan 31 2024, 02:15 AM IST

ಸಾರಾಂಶ

ಹುತಾತ್ಮರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಉದ್ಯಾನವನದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಹಾಗೂ ಪ್ರತಿಮೆಗೆ ಶಾಸಕ ಎಚ್.ಡಿ. ತಮ್ಮಯ್ಯ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್ ಪುಷ್ಪ ನಮನ ಸಲ್ಲಿಸಿ, ನಂತರ ಮೌನಾಚರಣೆ ಮಾಡಲಾಯಿತು. ಆಶಾಕಿರಣ ಅಂಧ ಮಕ್ಕಳ ಪಾಠ ಶಾಲೆ ವಿದ್ಯಾರ್ಥಿಗ‍ಳು ಗಾಂಧೀಜಿಯವರಿಗೆ ಪ್ರಿಯವಾದ ಗೀತೆಗಳನ್ನು ಹಾಡಿದರು.

- ಚಿಕ್ಕಮಗಳೂರಿನಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ । ಜಿಲ್ಲಾ ಕಾಂಗ್ರೆಸ್‌ನಿಂದಲೂ ಆಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ ಹಲವೆಡೆ ಮಂಗಳವಾರ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.

ಹುತಾತ್ಮರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಉದ್ಯಾನವನದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಹಾಗೂ ಪ್ರತಿಮೆಗೆ ಶಾಸಕ ಎಚ್.ಡಿ. ತಮ್ಮಯ್ಯ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್ ಪುಷ್ಪ ನಮನ ಸಲ್ಲಿಸಿ, ನಂತರ ಮೌನಾಚರಣೆ ಮಾಡಲಾಯಿತು. ಆಶಾಕಿರಣ ಅಂಧ ಮಕ್ಕಳ ಪಾಠ ಶಾಲೆ ವಿದ್ಯಾರ್ಥಿಗ‍ಳು ಗಾಂಧೀಜಿಯವರಿಗೆ ಪ್ರಿಯವಾದ ಗೀತೆಗಳನ್ನು ಹಾಡಿದರು.ಜಿಲ್ಲಾ ಕಾಂಗ್ರೆಸ್‌: ನಗರದ ಜಿಲ್ಲಾ ನ್ಯಾಯಾಲಯದ ಸಮೀಪದ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, 1948 ನೇ ಜನವರಿ 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ನಾಥೂರಾಮ್ ಗೂಡ್ಸೆ ಎಂಬ ವ್ಯಕ್ತಿ ಗುಂಡಿನ ಮಳೆ ಸುರಿಸಿ ಹತ್ಯೆಗೈದನು. ಜೀವ ಬಿಡುವ ಮುನ್ನ ಗಾಂಧೀಜಿ ತನ್ನ ಪ್ರಾಣವನ್ನು ತೆಗೆದುಕೊಂಡವನನ್ನು ದ್ವೇಷಿಸದೆ ಆತನನ್ನು ಕ್ಷಮಿಸಿ ಬಿಡು ಎನ್ನುತ್ತ ಹುತಾತ್ಮರಾದರು.

ಅಂದಿನಿಂದ ದೇಶದಲ್ಲಿ ಸರ್ಕಾರಗಳು ಮತ್ತು ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು ಹುತಾತ್ಮ ದಿನಾಚರಣೆ ಆಚರಿಸಿಕೊಂಡು ಬಂದಿವೆ. ನಾವೂ ಕೂಡ ಶಾಂತಿ, ಕ್ಷಮೆ ಮತ್ತು ಆಹಿಂಸೆ ಮಾರ್ಗದಲ್ಲಿ ನಡೆಯುವ ಪ್ರತಿಜ್ಞೆ ದಿನ ಇದಾಗಿದೆ ಎಂದರು. ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಪ್ರಪಂಚವೆ ಮೆಚ್ಚಿದ ಶಾಂತಿದೂತ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೂಡ್ಸೆ ಅವನನ್ನು ದೇವರು ಎಂದು ಹೇಳುವ ಮೂಲಕ ಹಿಂಸೆಗೆ ಒತ್ತು ನೀಡುವ ಸಂಘ ಪರಿವಾರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯುವ ಪ್ರತಿಜ್ಞೆ ಮಾಡುವುದರ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಒಂದಾಗೋಣ ಎಂದು ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಚ್.ಹರೀಶ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯ್ಡು, ನಗರ ಘಟಕದ ಅಧ್ಯಕ್ಷ ತನೋಜ್ ನಾಯ್ಡು, ಎನ್‌ಎಸ್‌ಯುಐ ಅಧ್ಯಕ್ಷ ಶ್ರೀಕಾಂತ್, ಬಿಸಿಎಂ ವಿಭಾಗದ ಅಧ್ಯಕ್ಷ ಡಿ.ಸಿ.ಪುಟ್ಟೇಗೌಡ, ಸೇವಾದಳ ಅಧ್ಯಕ್ಷ ಬಸವರಾಜ್, ಮುಖಂಡರಾದ ಶಿವರಾಂ, ರಾಮಚಂದ್ರ, ಚಂದ್ರಪ್ಪ, ಜಯರಾಜ್ ಅರಸ್, ವಿನಾಯಕ, ಪ್ರವೀಣ್‌ ಬೆಟಗೆರೆ, ಶೃದೀಪ್ ಮತ್ತು ಹಲವು ಮುಖಂಡರು ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.ಪೋಟೋ ಫೈಲ್‌ ನೇಮ್‌ 30 ಕೆಸಿಕೆಎಂ 3ಹುತಾತ್ಮರ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಮಹಾತ್ಮಗಾಂಧಿಜೀ ಪ್ರತಿಮೆಗೆ ಶಾಸಕ ಎಚ್‌.ಡಿ. ತಮ್ಮಯ್ಯ ಹಾಗೂ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.