ದಾಬಸ್ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಕೆರೆಯಲ್ಲಿ ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ. ಕೆರೆಯ ಸುತ್ತಮುತ್ತ ಪಕ್ಷಿಗಳು ಸತ್ತ ಮೀನುಗಳನ್ನು ತಿನ್ನುತ್ತಿವೆ
ದಾಬಸ್ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಕೆರೆಯಲ್ಲಿ ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ. ಕೆರೆಯ ಸುತ್ತಮುತ್ತ ಪಕ್ಷಿಗಳು ಸತ್ತ ಮೀನುಗಳನ್ನು ತಿನ್ನುತ್ತಿವೆ. ಕೆರೆಯಲ್ಲಿ ಏಕಾಏಕಿ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೀನುಗಳ ಸಾವಿಗೆ ಕಲುಷಿತ ನೀರು ಕೆರೆಗೆ ಹರಿದಿರುವ ಸಾಧ್ಯತೆಯಿದೆ ಎಂಬ ಶಂಕೆಯನ್ನು ಪರಿಸರ ಪ್ರೇಮಿಗಳು ವ್ಯಕ್ತಪಡಿಸಿದ್ದಾರೆ. ಪರಿಸರ ಪ್ರೇಮಿ ವಿಶ್ವನಾಥ್ ಮಾತನಾಡಿ, ಮಣ್ಣೆ ಕೆರೆಗೆ ರಾಸಾಯನಿಕ ಮಿಶ್ರಿತ ನೀರು ಹರಿದು ಬಂದಿರುವುದರಿಂದ ಮೀನುಗಳು ಸತ್ತಿವೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಮೀನುಗಳ ಸಾವಿಗೆ ಕಾರಣ ತಿಳಿದು ಕ್ರಮ ಕೈಗೊಳ್ಳಬೇಕು. ಸತ್ತ ಮೀನುಗಳನ್ನು ತೆರವುಗೊಳಿಸಿ ಕೆರೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.