ಗಾಂಧಿ ಜಯಂತಿ ಅಂಗವಾಗಿ ಇಂದು ಸಾಮೂಹಿಕ ಶ್ರಮದಾನ

| Published : Oct 01 2024, 01:31 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಹಾವೇರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅ. ೧ರಂದು ಬೆಳಗ್ಗೆ ೬ ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಹಾವೇರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅ. ೧ರಂದು ಬೆಳಗ್ಗೆ ೬ ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.ವಾರ್ಡ್ ನಂ.೧ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಜಿ.ಪಂ.ಉಪ ಕಾರ್ಯದರ್ಶಿಗಳ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ವಿಭಾಗದ ಮುಖ್ಯಸ್ಥರು ಹಾಗೂ ಎಲ್ಲ ಸಿಬ್ಬಂದಿ, ವಾರ್ಡ್ ನಂ.೨ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಲೋಕೋಪಯೋಗಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಾರ್ಡ್ ನಂ.೩ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಪರಿಸರ ಹಾಗೂ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು, ಡಯಟ್ ಉಪನಿರ್ದೇಶಕರು ಹಾಗೂ ಸಹಕಾರಿ ಸಂಘಗಳ ಉಪ ನಿಬಂಧಕರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಾರ್ಡ್ ನಂ.೪ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ನಗರ ಹಾಸ್ಟೆಲ್ ವಾರ್ಡ್‌ಗಳು, ವಾರ್ಡ್ ನಂ ೫ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ನಗರ ಹಾಸ್ಟೆಲ್ ವಾರ್ಡನ್‌ಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ವಾರ್ಡ್ ನಂ.೬ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಾರ್ಡ್ ನಂ.೭ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಡಾ. ಬಿ.ಆರ್. ಅಂಬೇಡ್ಕರ್‌, ಮಹರ್ಷಿ ವಾಲ್ಮೀಕಿ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ನಿಗಮಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಾರ್ಡ್ ನಂ.೮ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ರೇಷ್ಮೆ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಾರ್ಡ್ ನಂ.೯ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಾರ್ಡ್ ನಂ.೧೦ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಹಾಗೂ ಉದ್ಯೋಗ ವಿನಿಮಯ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ವಾರ್ಡ್ ನಂ.೧೧ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಹಾಗೂ ಆಯುಷ್ ಅಧಿಕಾರಿಗಳ ನೇತೃತ್ವದಲ್ಲಿ ವಾರ್ಡ್ ನಂ.೧೨ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ವಾರ್ಡ್ ನಂ.೧೩ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಜಿಲ್ಲಾ ಅಂಕಿ-ಸಂಖ್ಯೆ ಅಧಿಕಾರಿ, ಪಶು ಪಾಲನೆ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ವಾರ್ಡ್ ನಂ.೧೪ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ, ವಾರ್ಡ್ ನಂ.೧೫ರಲ್ಲಿ ಸ್ಥಳೀಯ ವಾರ್ಡ್ ಸದಸ್ಯರ, ಅಬಕಾರಿ ಇಲಾಖೆ ಉಪ ಆಯುಕ್ತರು ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ನೇತೃತ್ವದಲ್ಲಿ ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಅದೇ ರೀತಿ ವಾರ್ಡ್ ನಂ.೧೬ ರಿಂದ ೩೨ರವರೆಗೆ ಆಯಾ ವಾರ್ಡ್ ಸದಸ್ಯರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಆಯಾ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.