ಹಾವೇರಿ: ಕಾಗಿನೆಲೆ ಕನಕ ಗುರುಪೀಠದ ಹರಿಹರ ತಾಲೂಕಿನ ಬೆಳ್ಳೂಡಿ ಶಾಖಾ ಮಠದಲ್ಲಿ ಏ. 10ರಂದು ಶ್ರೀ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಯಂತ್ಯುತ್ಸವದ ಅಂಗವಾಗಿ ಅಂದು ಶ್ರೀ ಮಠದಿಂದ 45 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ ಜರುಗಲಿದೆ.
ಕನಕ ಗುರುಪೀಠದ ಬೆಳ್ಳೂಡಿ ಶಾಖಾ ಮಠದ ಎಲ್ಲ ಸಮಾರಂಭಕ್ಕೆ ಕನಕ ಗುರುಪೀಠದ ಪೀಠಾಧಿಪತಿ ಶ್ರೀ ನಿರಂಜನಾನಂದಪುರಿ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಅಂದು ನಡೆಯುವ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಶಾಸಕರು, ಮಠಾಧೀಶರು, ಗಣ್ಯರು ಆಗಮಿಸಲಿದ್ದಾರೆ. ಹಾವೇರಿ ಜಿಲ್ಲೆಯ ಕುರುಬ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಸಮಾಜದ ಬಂಧುಗಳು ಕನಕಾಭಿಮಾನಿಗಳು ಸಮಾರಂಭಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕುರುಬ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಆನ್ವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಗಾಜೀಗೌಡ್ರ ತಿಳಿಸಿದ್ದಾರೆ.ಏಪ್ರಿಲ್ 10ರಂದು ಬೆಳ್ಳೂಡಿ ಕನಕಮಠದಲ್ಲಿ ಸಾಮೂಹಿಕ ವಿವಾಹ
ಕಾಗಿನೆಲೆ ಕನಕ ಗುರುಪೀಠದ ಹರಿಹರ ತಾಲೂಕಿನ ಬೆಳ್ಳೂಡಿ ಶಾಖಾ ಮಠದಲ್ಲಿ ಏ. 10ರಂದು ಶ್ರೀ ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಯಂತ್ಯುತ್ಸವದ ಅಂಗವಾಗಿ ಅಂದು ಶ್ರೀ ಮಠದಿಂದ 45 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ ಜರುಗಲಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.