ದುಂದು ವೆಚ್ಚದ ಮದುವೆಗಳಿಗೆ ಕಡಿವಾಣ ಹಾಕಿ ಸಾಮೂಹಿಕ ವಿವಾಹದಿಂದ ಬಡವರಿಗೆ ಆರ್ಥಿಕ ಸಂಕಷ್ಟದಿಂದ ಪಾರಾಗಲು ಅನುಕೂಲಕರವಾಗಲಿದೆ ಎಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ ಅಭಿಪ್ರಾಯಪಟ್ಟರು

ಮಾನ್ವಿ: ದುಂದು ವೆಚ್ಚದ ಮದುವೆಗಳಿಗೆ ಕಡಿವಾಣ ಹಾಕಿ ಸಾಮೂಹಿಕ ವಿವಾಹದಿಂದ ಬಡವರಿಗೆ ಆರ್ಥಿಕ ಸಂಕಷ್ಟದಿಂದ ಪಾರಾಗಲು ಅನುಕೂಲಕರವಾಗಲಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ ಅಭಿಪ್ರಾಯಪಟ್ಟರುಪಟ್ಣಣದ ಇಸ್ಲಾಂ ನಗರದಲ್ಲಿ ಭಾನುವಾರ ಆಯೋಜಿಸಿದ್ದ 111 ಜೋಡಿ ಮುಸ್ಲಿಂ ಸಮುದಾಯದವರ ಸಾಮೂಹಿಕ ವಿವಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡ ಜನರಿಗೆ ಇಂದು ವಿವಾಹ ಮಾಡಿಸುವುದು ಹೆಚ್ಚಿನ ಹೊರೆಯಾಗಿದೆ, ಮದುವೆ ಬಂಧವನ್ನು ಜೋಡಿಸಿಕೊಡುವುದು ಸಹ ಪುಣ್ಯ ಕೆಲಸ. ಸಂಕಷ್ಟದಲ್ಲಿರುವ ಜನರ ನೆರವು ನೀಡುವುದು ಕೇವಲ ಔದಾರ್ಯವಲ್ಲ. ಬದಲು ಜಾಗೃತ ಪ್ರಜ್ಞೆಯಾಗಿದೆ ಎಂದರು.

ಮದುವೆಗಳೆಂದರೆ ಸಾಲ ಮಾಡಿ ಮದುವೆ ಮಾಡಿಸಬೇಕಾಗಿದೆ, ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕಾಗಿದೆ ಎಂದ ಅವರು, ಸಮಾಜದಲ್ಲಿ ಸಮಾನತೆ ಸಂದೇಶ ಸಾರಲು ಸಾಮೂಹಿಕ ವಿವಾಹಗಳು ಪೂರಕವಾಗಿದ್ದು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಹ ಪುಣ್ಯದ ಕಾರ್ಯವಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಮುಸ್ಲಿಂ ಸಮಾಜದ ಬಾಂಧವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವಷ್ಟು ಸಮರ್ಥರಿದ್ದು ಅವರುಗಳು ಸಹ ಸರಳ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುವುದರ ಮುಖಾಂತರ ಇತರರಿಗೆ ಮಾದರಿಯಾಗಬೇಕು ಎಂದರು. ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಸಮಾಜದಲ್ಲಿ ಬದಲಾವಣೆಯನ್ನು ಹಣದಿಂದ ಮಾತ್ರತರುವುದಕ್ಕೆ ಸಾಧ್ಯವಾಗುವುದಿಲ್ಲ, ಸಾಮಾಜಿಕ ಕಾರ್ಯಕ್ರಮಗಳಿಂದ ಮಾತ್ರ ಬದಲಾವಣೆಯನ್ನು ತರುವುದಕ್ಕೆ ಸಾಧ್ಯವಾಗುತ್ತದೆ. ಆದ್ದರಿಂದ ಇಂತಹ ಮುಸ್ಲಿಂ ಸಮುದಾಯದವರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಕೂಡ ನಡೆಸುವ ಮೂಲಕ ದುಂದುವೆಚ್ಚದ ಮದುವೆಗಳಿಂದಾಗುವ ಆರ್ಥಿಕ ಹೊರೆಯನ್ನುತಪ್ಪಿಸುವುದಕ್ಕೆ ಸಾಧ್ಯವಾಗುತ್ತದೆ. ಬಡ ಕುಟುಂಬಗಳಿಗೆ ನೆರವಾಗುತ್ತದೆ ಎಂದರು.

ರಾಜ್ಯ ಸರ್ಕಾರವು ರಾಜ್ಯದಲ್ಲಿನ ಅಲ್ಪ ಸಂಖ್ಯಾತ ಸಮುದಾಯದವರ ಅಭೀವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅರ್ಥಿಕವಾಗಿ ಮೇಲೆತ್ತುವುದಕ್ಕೆ ಅನೇಕ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ನೀಡಲಾಗಿದೆ. ಅಲ್ಪ ಸಂಖ್ಯಾತ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗಾಗಿ ಮುಖ್ಯ ಮಂತ್ರಿಗಳು ರಾಜ್ಯದಲ್ಲಿ ಅಲ್ಪಸಂಖ್ಯಾತರ ವಸತಿಯುತ ಶಿಕ್ಷಣ ಶಾಲೆಗಳನ್ನು ನಿರ್ಮಾಣ ಮಾಡುವುದಕ್ಕೆ ಚಾಲನೆ ನೀಡಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣವನ್ನು ಪಡೆದುಕೊಳ್ಳಿ ಸಾಮೂಹಿಕ ವಿವಾಹದಲ್ಲಿ ಜೋಡಿಯಾದ ದಂಪತಿಗಳು ಮಿತ ಸಂತಾನವನ್ನು ಪಡೆದು ಆದರ್ಶ ಜೀವನವನ್ನು ತಮ್ಮದಾಗಿಸಿಕೊಳ್ಳಿ ಎಂದು ತಿಳಿಸಿದರು.ಸಮಾರಂಭದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಶಾಸಕ ಹಂಪಯ್ಯನಾಯಕ, ಎಂಎಲ್ಸಿ ಎ.ವಸಂತಕುಮಾರ, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕರಾದರಾಜಾ ವೆಂಕಟಪ್ಪನಾಯಕ, ಗಂಗಾಧರ ನಾಯಕ, ಬಸವನಗೌಡ ಬ್ಯಾಗವಾಟ, ಪ್ರತಾಪಗೌಡ ಪಾಟೀಲ್, ರಾಜಶೇಖರ ನಾಯಕ ಮಾತನಾಡಿದರು.

ಮುಸ್ಲಿಂ ಸಮುದಾಯದವರ 111 ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉದ್ದಿಮೇದಾರರಾದ ಸೈಯದ್ ಅಕ್ಬರ್ ಪಾಷಾ ಹುಸೇನಿ ರವರ ಪುತ್ರ ಸೈಯಾದ್ ಆತಿಫ್ಆದ್ನಾನರವರ ವಿವಾಹ ನಡೆಯಿತು.ಜಮಾಹತೆ ಇಸ್ಲಾಮಿ ಹಿಂದ್ ನ್ಯೂ ದೆಹಲಿಯ ಉಪಾಧ್ಯಕ್ಷರಾದ ಮೌಲನಾ ವಲಿಯುಲ್ಲಾ ಸಯೀದಿ ಫಲಾಹಿ, ರಾಜ್ಯ ಕಾರ್ಯದರ್ಶಿ ಹಾಗೂ ಮಂಗಳೂರಿನ ಶಾಂತಿ ಪ್ರಕಾಶನದ ಅಧ್ಯಕ್ಷರಾದ ಜನಾಬ್ ಮಹಮ್ಮದ್ಕುನ್ಹಿ, ಮುಸ್ಲಿಂ ಧರ್ಮ ಗುರುಗಳಾದ ಸೈಯಾದ್ ಸಜ್ಜದ್ ಮತವಾಲೆ, ಖಾಲಿದ್ಗುರು, ಶೇಖ್ ಫರೀದ್ಉಮ್ರಿ, ರವಿ ಬೋಸರಾಜು ಸೇರಿ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಸರಳ ಸಾಮೂಹಿಕ ವಿವಾಹ ಯಶಸ್ವಿರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಾರಿಗೊಂಡಿರುವ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಡಿಯಲ್ಲಿ ದಾರುಸ್ಸಲಾಮ್ ಫೌಂಡೇಶನ್ ಟ್ರಸ್ಟ್ ಮಾನವಿ ಇವರಿಂದ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ 111ಕ್ಕೂ ಅಧಿಕ ಜೋಡಿಗಳ ಸರಳ ವಿವಾಹ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಯೋಜನೆಯಡಿ ಜಿಲ್ಲೆಗೆ ಒಟ್ಟು 200 ಜೋಡಿಗಳ ಫಲಾನುಭವಿಗಳಿಗೆ ಭೌತಿಕ ಗುರಿ ನಿಗದಿಪಡಿಸಿದ್ದು, ಈ ಯೋಜನೆಯಡಿ ಪ್ರತಿ ಜೋಡಿಗೆ 50,000 ರು. ಮತ್ತು ಕಾರ್ಯಕ್ರಮದ ಆಯೋಜಕರಿಗೆ ಪ್ರತಿ ಜೋಡಿಗೆ 5,000 ರು.ಗಳನ್ನು ನೀಡಲಾಗುತ್ತದೆ. ಅಲ್ಪಸಂಖ್ಯಾತರ ಸಮುದಾಯದವರು ಈ ಯೋಜನೆಯ ಸದುಪಯೋಗ ಪಡಿಸಿಕೊಂಡಿದ್ದರಿಂದ ಮಾನವಿಯಲ್ಲಿ ಸಾಮೂಹಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.