ಸಾರಾಂಶ
ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಸಾಮೂಹಿಕ ನವಗ್ರಹ ಪೂಜೆ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಸಾಮೂಹಿಕ ನವಗ್ರಹ ಪೂಜೆ ನಡೆಯಿತು.ಬೆಳಗ್ಗಿನಿಂದಲೂ ವಿವಿಧ ಪೂಜಾ ಕೈಂಕರ್ಯಗಳು ಅರ್ಚಕ ಜಗದೀಶ್ ಉಡುಪ ಅವರ ನೇತೃತ್ವದಲ್ಲಿ ನಡೆದವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂಥರ್‌ಗೌಡ ಪಾಲ್ಗೊಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಐಗೂರು ಮುತ್ತಪ್ಪ ಸ್ವಾಮಿ ದೇವಾಲಯಕ್ಕೆ 2 ಲಕ್ಷ, ಹರಿಹರ ಯುವಕ ಮಂಡಲದ ಸಮುದಾಯ ಭವನಕ್ಕೆ 2 ಲಕ್ಷ, ಯಡೂರು ಸಮುದಾಯ ಭವನಕ್ಕೆ 1.50 ಲಕ್ಷ ಅನುದಾನ ಹಾಗೂ ಗರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಗ್ರಾಮಕ್ಕೆ ಸಿಲಿಕಾನ್ ಚೇಂಬರ್ ನಿರ್ಮಾಣಕ್ಕೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ವಹಿಸಿದ್ದರು. ವೇದಿಕೆಯಲ್ಲಿ ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಸಬಿತಾ ಚನ್ನಕೇಶವ, ನಿವೃತ್ತ ಉಪನ್ಯಾಸಕ ಡಿ.ಎಸ್.ಚಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ,ಪಿ, ದಿನೇಶ್, ಲಿಂಗೇರಿ ರಾಜೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್ ಉಪಸ್ಥಿತರಿದ್ದರು.