ಬಳ್ಳಾರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

| Published : Apr 12 2024, 01:10 AM IST

ಬಳ್ಳಾರಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವ್ರತ ಮಾಡಿದ್ದ ಮುಸ್ಲಿಮರು ಗುರುವಾರ ಹೊಸ ಬಟ್ಟೆಗಳನ್ನು ತೊಟ್ಟು ಹಬ್ಬದ ಸಡಗರದಲ್ಲಿದ್ದರು.

ಬಳ್ಳಾರಿ: ನಗರ ಸೇರಿದಂತೆ ಜಿಲ್ಲಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ಹಬ್ಬ ಆಚರಿಸಿದರು.

ಇಲ್ಲಿನ ಕೌಲ್‌ಬಜಾರ್ ಪ್ರದೇಶದ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೃದ್ಧರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರು ಪಾಲ್ಗೊಂಡು ಪುನೀತರಾದರು. ಸಾಮೂಹಿಕ ಪ್ರಾರ್ಥನೆ ಬಳಿಕ ಪರಸ್ಪರ ಆಲಿಂಗಿಸಿ ಶುಭಾಶಯ ಕೋರಿದರು. ಧರ್ಮಗುರು ಖಾಜಿ ಅವರು ಹಬ್ಬದ ಸಂದೇಶ ಸಾರಿದರಲ್ಲದೆ, ರಂಜಾನ್ ನ ಮಹತ್ವ ಹಾಗೂ ಉದ್ದೇಶ ಕುರಿತು ತಿಳಿಸಿದರು.

ಜಿಲ್ಲಾ ಸಚಿವ ಬಿ.ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ, ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಸೇರಿದಂತೆ ವಿವಿಧ ಪಕ್ಷಗಳ ಗಣ್ಯರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವ್ರತ ಮಾಡಿದ್ದ ಮುಸ್ಲಿಮರು ಗುರುವಾರ ಹೊಸ ಬಟ್ಟೆಗಳನ್ನು ತೊಟ್ಟು ಹಬ್ಬದ ಸಡಗರದಲ್ಲಿದ್ದರು. ಹಬ್ಬದ ಹಿನ್ನೆಲೆಯಲ್ಲಿ ತಯಾರಿಸಿದ್ದ ವಿಶೇಷ ಖಾದ್ಯಗಳನ್ನು ಸವಿದರು. ಬಡವರಿಗೆ ಬಟ್ಟೆ, ಹಣ ದಾನ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲೂ ರಂಜಾನ್ ಹಬ್ಬದ ಸಡಗರವಿತ್ತು. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು. ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ದೃಶ್ಯಗಳು ಕಂಡು ಬಂದವು.