ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ವಲಯದಲ್ಲಿ ಸಾಮೂಹಿಕ ಶನಿದೇವರ ಪೂಜೆ ಹಾಗೂ ಧಾರ್ಮಿಕ ಸಭೆ ನಡೆಯಿತು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀರೇಣುಕಾ ಶಿವಾಚಾರ್ಯ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಶ್ರೀ ಕ್ಷೇತ್ರದ ಡಾ..ಡಿ.ವೀರೇಂದ್ರ ಹೆಗ್ಗಡೆ ಅವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವು ಸಮಾಜಮುಖಿ ಕಾರ್ಯಗಳಿಂದ ಗ್ರಾಮಗಳು ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಮಾತನಾಡಿ, ಶ್ರೀ ಕ್ಷೇತ್ರದ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.ಜಿಲ್ಲಾ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಲಿಂಗೇಗೌಡ ಮಾತನಾಡಿ, ಸಂಸ್ಥೆಯ ಬ್ಯಾಂಕಿನ ವ್ಯವಸ್ಥೆ ಪ್ರತಿ ಹಳ್ಳಿಯನ್ನು ತಲುಪಿ ಯಾವುದೇ ದಾಖಲೆಗಳಿಲ್ಲದೆ ಸ್ವಸಾಯ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಪ್ರಗತಿ ನಿಧಿ ಪಡೆದು ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದರು. ತಾಲೂಕಿನ ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ, ಯೋಜನೆ ಮೂಲಕ ನಡೆಯುವ ಮಾಸಶಾನ ವಿತರಣೆ, ಸಮುದಾಯ ಅಭಿವೃದ್ಧಿಗೆ ಅನುದಾನ, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನದೀಪ ಶಿಕ್ಷಕರ ಸೇವೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸರಸ್ವತಿ, ಮುಖಂಡ ವೆಂಕಟೇಶ್, ಕೃಷಿ ಮೇಲ್ವಿಚಾರಕ ಪವನ್, ವಲಯದ ಮೇಲ್ವಿಚಾರಕಿ ಚೇತನ, ಎಲ್ಲಾ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.ನಾಳೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೀಪೋತ್ಸವ
ಮಂಡ್ಯ:ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಜ.14ರ ಸಂಜೆ 6 ಗಂಟೆಗೆ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಇರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೀಪೋತ್ಸವ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ಇದೆ. ಇದೇ ವೇಳೆ ರಂಗರತ್ನ ಕಲಾವಿದರ ಸಂಘದಿಂದ ಭಕ್ತಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಹಾಗೂ ಭಕ್ತ ಮಂಡಳಿ ತಿಳಿಸಿದೆ.