ನಾಳೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ

| Published : May 09 2025, 12:32 AM IST

ಸಾರಾಂಶ

ಶೆಟ್ಟಿಹಳ್ಳಿಯ ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕರಾದ ಹನುಮೇಗೌಡ, ಶ್ರೀ ಲಕ್ಷ್ಮೀ ರಂಗನಾಥ್ ಎಜುಕೇಶನ್ ಟ್ರಸ್ಟ್, ರೋಟರಿ ಕ್ಲಬ್ ಆಫ್ ಸೆಂಟ್ರಲ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ತಪಾಸಣೆ, ಸ್ತ್ರೀರೋಗ ತಪಾಸಣೆ, ಉಸಿರಾಟ ತೊಂದರೆ, ದಂತ ತಪಾಸಣೆ, ಕೀಲು ಮತ್ತು ಮೂಳೆ ರೋಗ ತಪಾಸಣೆ, ಕಣ್ಣಿನ ಪರೀಕ್ಷೆ ಸೇರಿದಂತೆ ಇತರೆ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಶೆಟ್ಟಿಹಳ್ಳಿ ಗಡಿ ಸಾತೇನಹಳ್ಳಿ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಮೇ.೧೦ ರಂದು ಬೆಳಿಗ್ಗೆ ೯:೩೦ಕ್ಕೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಆಫ್ ಸೆಂಟ್ರಲ್ ಅಧ್ಯಕ್ಷ ಎಂ.ಡಿ. ನಾಗೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಶೆಟ್ಟಿಹಳ್ಳಿಯ ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕರಾದ ಹನುಮೇಗೌಡ, ಶ್ರೀ ಲಕ್ಷ್ಮೀ ರಂಗನಾಥ್ ಎಜುಕೇಶನ್ ಟ್ರಸ್ಟ್, ರೋಟರಿ ಕ್ಲಬ್ ಆಫ್ ಸೆಂಟ್ರಲ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಮಧುಮೇಹ ತಪಾಸಣೆ, ರಕ್ತದೊತ್ತಡ ತಪಾಸಣೆ, ಸ್ತ್ರೀರೋಗ ತಪಾಸಣೆ, ಉಸಿರಾಟ ತೊಂದರೆ, ದಂತ ತಪಾಸಣೆ, ಕೀಲು ಮತ್ತು ಮೂಳೆ ರೋಗ ತಪಾಸಣೆ, ಕಣ್ಣಿನ ಪರೀಕ್ಷೆ ಸೇರಿದಂತೆ ಇತರೆ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.

ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪವಿಭಾಗಧಿಕಾರಿ ಮಾರುತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ, ಭಾರತೀಯ ರೆಡ್‌ಕ್ರಾಸ್ ಅಧ್ಯಕ್ಷರಾದ ಎಚ್.ಪಿ. ಮೋಹನ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್‌. ಬೊಮ್ಮೇಗೌಡ, ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ಧನಂಜಯ್, ಮಣಿ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸೌಮ್ಯಮಣಿ, ಜೀವಜ್ಯೋತಿ ಆಸ್ಪತ್ರೆಯ ಡಾ. ಚಂದನ್, ವಿ ಕೇರ್‌ ಡೆಂಟಲ್ ಮುಖ್ಯಸ್ಥರಾದ ಡಾ. ವೈಭವ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್‌. ಬೊಮ್ಮೇಗೌಡ, ರೊಟೆರಿಯನ್ ನಾಗೇಂದ್ರ, ಶೆಟ್ಟಿಹಳ್ಳಿಯ ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕರಾದ ಹನುಮೇಗೌಡ, ರೊಟರಿಯನ್ ಪ್ರಕಾಶ್, ನಾಗರಾಜು ಹೆತ್ತೂರ್‌ ಇತರರು ಇದ್ದರು.