ಸಾರಾಂಶ
ತರೀಕೆರೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಸೀಲ್ದಾರ್ ವಿ.ಎಸ್.ರಾಜೀವ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜೆ.ಚಂದ್ರಶೇಖರ್, ತಾಪಂ ಇಒ ಗಣೇಶ್ ಇದ್ದರು.
ಕನ್ನಡಪ್ರಭ ವಾರ್ತೆ ತರೀಕೆರೆ
ಶಾಸಕ ಜಿ.ಎಚ್.ಶ್ರೀನಿವಾಸ್ ನಿರ್ದೇಶನದಂತೆ ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಬೃಹತ್ ಲಾರ್ವಾ ಸಮೀಕ್ಷಾ ಅಭಿಯಾನ ಹಮ್ಮಿಕೊಳ್ಳಲಾಗಿದೆಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ಸೋಮವಾರ ಸಾರ್ವಜನಿಕ ಆಸ್ಪತ್ರೆ ತಾಲೂಕು ಆರೋಗ್ಯಾಧಿಕಾರಿ ಸಭಾಂಗಣದಲ್ಲಿ ಡೆಂಘೀ ನಿಯಂತ್ರಣಕ್ಕೆ ಏರ್ಪಾಡಾಗಿದ್ದ ಅಂತರ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿ, ತಾಲೂಕು ಆಡಳಿತ, ಕಂದಾಯ ಇಲಾಖೆ, ತಾಪಂ, ತಾಲೂಕು ಆರೋಗ್ಯ ಇಲಾಖೆ, ಪುರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ಜು.16ರಂದು ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಏಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತು ತರೀಕೆರೆ ಮತ್ತು ಅಜ್ಜಂಪುರ ಪಟ್ಟಣದಲ್ಲಿ ಜು.19 ರಂದು ಲಾರ್ವಾ ಸಮೀಕ್ಷೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್ ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿ, ಡಂಘೀ ನಿಯಂತ್ರಣ ಕ್ರಮಗಳ ಕುರಿತು ಪಿಪಿಟಿ ಪ್ರಸೆಂಟೇಶನ್ ಮೂಲಕ ಮಾಹಿತಿ ನೀಡಿ, ತಾಲೂಕಿನಾದ್ಯಂತ ನೆಡೆಯುವ ಈ ಬೃಹತ್ ಲಾರ್ವಾ ಸಮೀಕ್ಷೆ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕೋರಿದರು.
ತಹಸೀಲ್ದಾರ್ ವಿ.ಎಸ್.ರಾಜೀವ್, ತಾಪಂ ಇಒ ಗಣೇಶ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಚರಣ್ ರಾಜ್, ಪಿಡಿಒಗಳು, ಶಿಕ್ಷಣ ಸಂಯೋಜಕರು, ಅಂಗನವಾಡಿ ಮೇಲ್ವಿಚಾರಕರು, ರಾಜಸ್ವ ನಿರೀಕ್ಷಕರು, ಕೃಷಿ ತೋಟಗಾರಿಕೆ ಅಧಿಕಾರಿಗಳು ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.