ಜ.6ಕ್ಕೆ ಉಸ್ತುವಾರಿ ಸಚಿವ, ಡೀಸಿ ವಿರುದ್ಧ ಬೃಹತ್ ಪ್ರತಿಭಟನೆ

| Published : Dec 31 2024, 01:04 AM IST

ಜ.6ಕ್ಕೆ ಉಸ್ತುವಾರಿ ಸಚಿವ, ಡೀಸಿ ವಿರುದ್ಧ ಬೃಹತ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರೈತ ಸಂಘದ ರಾಜ್ಯ ಅಧ್ಯಕ್ಷರು, ಮೈಸೂರು ಮತ್ತು ಬೆಂಗಳೂರು ವಿಭಾಗೀಯ ಮಟ್ಟದ ಎಲ್ಲ ಜಿಲ್ಲೆಗಳ ಸಂಘಟನೆ ಮುಖಂಡರು ಭಾಗವಹಿಸಲಿದ್ದು ನಮ್ಮ ಜಿಲ್ಲೆಯ ರೈತರು ಕನ್ನಡ ಪರ, ಪ್ರಗತಿಪರ, ಸಂಘಟನೆಯ ಎಲ್ಲರೂ ಸಹ ಕೈಜೋಡಿಸಿ ಪ್ರತಿಭಟನೆ ಯಲ್ಲಿ ಪಾಲ್ಗೊಂಡು ದೊಡ್ಡ ಮಟ್ಟದ ಚಳುವಳಿ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಬುದ್ಧಿ ಕಲಿಸುವಂತಹ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಕನಕಪುರ

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಜನವರಿ ೬ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ತಿಳಿಸಿದರು.

ನಗರದ ರೈತ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿಗಳು ರಾಮನಗರ ಜಿಲ್ಲೆಗೆ ಬಂದ ಮೇಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡದಂತೆ ನಿಷೇಧ ಹೇರಿದ್ದಾರೆ. ಅವರು ನಿಗದಿ ಮಾಡಿದ ಜಾಗದಲ್ಲಿ ಪ್ರತಿಭಟನೆ ಮಾಡಿ ಎಂದು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಇದರ ವಿರುದ್ಧ ಸಾಕಷ್ಟು ಹೋರಾಟಗಳನ್ನು ನಡೆಸಿದರೂ ಜಿಲ್ಲಾಧಿಕಾರಿಗಳು ಪೋಲೀಸರನ್ನು ಬಳಸಿಕೊಂಡು ದೌರ್ಜನ್ಯದಿಂದ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಜಿಲ್ಲೆಗೆ ಬಂದ ಮೇಲೆ ಯಾವುದೇ ರೈತರು ಮತ್ತು ಸಂಘಟನೆಗಳನ್ನು ಸಭೆ ಕರೆದು ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅರಿವೇ ಇಲ್ಲ. ಕಂದಾಯ ಇಲಾಖೆ ಯಲ್ಲಿ ಬಹಳಷ್ಟು ಸಮಸ್ಯೆ ಇದೆ ಕಾಡುಪ್ರಾಣಿಗಳ ಸಮಸ್ಯೆ ಬಹಳ ದೊಡ್ಡದಿದೆ ಆದರೂ ಕೂಡ ಈ ಜಿಲ್ಲಾಧಿಕಾರಿಗಳು ಬಾಗಿಲು ಹಾಕಿಕೊಂಡು ಕೆಲಸ ಮಾಡುವ ಮನಸ್ಥಿತಿಯಲ್ಲಿ ದ್ದಾರೆ ಇವರ ಮುಂದೆ ಯಾವ ರೈತರು ಸಾರ್ವಜನಿಕರು ಸಮಸ್ಯೆಗಳನ್ನು ಹೇಳಿಕೊಳ್ಳುವಂತಹ ವಾತಾವರಣ ಇಲ್ಲ ಎಂದು ಆರೋಪಿಸಿದರು.

ರೈತ ಸಂಘದ ರಾಜ್ಯ ಅಧ್ಯಕ್ಷರು, ಮೈಸೂರು ಮತ್ತು ಬೆಂಗಳೂರು ವಿಭಾಗೀಯ ಮಟ್ಟದ ಎಲ್ಲ ಜಿಲ್ಲೆಗಳ ಸಂಘಟನೆ ಮುಖಂಡರು ಭಾಗವಹಿಸಲಿದ್ದು ನಮ್ಮ ಜಿಲ್ಲೆಯ ರೈತರು ಕನ್ನಡ ಪರ, ಪ್ರಗತಿಪರ, ಸಂಘಟನೆಯ ಎಲ್ಲರೂ ಸಹ ಕೈಜೋಡಿಸಿ ಪ್ರತಿಭಟನೆ ಯಲ್ಲಿ ಪಾಲ್ಗೊಂಡು ದೊಡ್ಡ ಮಟ್ಟದ ಚಳುವಳಿ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಬುದ್ಧಿ ಕಲಿಸುವಂತಹ ಕೆಲಸ ಮಾಡಬೇಕು ರೈತರು ಹಾಗೂ ಸಮಸ್ಯೆ ಹೇಳಿಕೊಂಡು ಬರುವ ಸಾರ್ವಜನಿಕರಿಗೆ ಯಾವ ರೀತಿ ಸ್ಪಂದಿಸಬೇಕು ಎಂದು ನಮ್ಮ ಜಿಲ್ಲೆಯಲ್ಲೇ ಇವರಿಗೆ ಕಲಿಸಿ ಮುಂದಕ್ಕೆ ಕಳುಹಿಸಿಕೊಡಬೇಕು ಎಂದು ಕರೆ ನೀಡಿದರು.

ಪ್ರಗತಿಪರ ಸಂಘಟನೆ ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯ ರೈತ ಸಮುದಾಯದ ಬದುಕು ಭವಣೆ ಸಂಕಷ್ಟವನ್ನು ಜಿಲ್ಲೆಯ ಜನಪ್ರತಿನಿಧಿಗಲೂ ತಿಳಿದಿದ್ದರೂ ಜಾಣ ಮೌನಕ್ಕೆ ಶರಣಾಗಿದ್ದಾರೆ. ಆಡಳಿತ ನಡೆಸುವ ಅಧಿಕಾರಿಗಳು ಸಿಬ್ಬಂದಿ ವರ್ಗ ಇದನ್ನು ಬಂಡವಾಳ ಮಾಡಿಕೊಂಡು ವ್ಯಾಪಕ ಭ್ರಷ್ಟಾಚಾರ, ಲಂಚಗುಳಿತನದಲ್ಲಿ ತೊಡಗಿದ್ದಾರೆ. ರೈತರು ಸಣ್ಣ ಪುಟ್ಟ ಕೆಲಸ ಕಾರ್ಯಗಳಿಗೂ ವರ್ಷಗಟ್ಟಲೆ ಅಲೆದಾಡುವ ಪರಿಸ್ಥಿತಿ ಇದೆ.

ಈ ನಡವಳಿಕೆಯನ್ನು ಖಂಡಿಸಿ ಜನವರಿ 6 ರಂದು ಜಿಲ್ಲಾ ಅಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ರೈತರ ಅಹವಾಲು ಕೇಳದ ಜಿಲ್ಲಾಧಿಕಾರಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಪೊಲೀಸರ ಬಲಪ್ರಯೋಗಿಸಿ ಚಳುವಳಿ ಯನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿರುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಸಂಘಟನೆಗಳು ಕೈ ಜೋಡಿಸಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ತಕ್ಕ ಪಾಠವನ್ನು ಕಲಿಸಬೇಕೆಂದು ಮನವಿ ಮಾಡಿದರು.

ರಾಜ್ಯ ರೈತ ಸಂಘದ ಜಿಲಾಧ್ಯಕ್ಷ ತಿಮ್ಮೇಗೌಡ, ಗೌರವಾಧ್ಯಕ್ಷ ಕೃಷ್ಣಯ್ಯ,ಪ್ರಶಾಂತ್ ಹೊಸದುರ್ಗ, ರೈತ ಮುಖಂಡರು ಸಿದ್ದರಾಜು, ರವಿಚಂದ್ರನ್, ಲೋಕೇಶ್ ಉಪಸ್ಥಿತರಿದ್ದರು.