ವೆನ್ಲಾಕ್‌ನಲ್ಲಿ ಸುಸಜ್ಜಿತ ವಾಚನಾಲಯಕ್ಕೆ ಮಾಸ್ಟರ್ ಪ್ಲಾನ್: ಯು.ಟಿ. ಖಾದರ್

| Published : Sep 01 2024, 01:49 AM IST / Updated: Sep 01 2024, 01:50 AM IST

ವೆನ್ಲಾಕ್‌ನಲ್ಲಿ ಸುಸಜ್ಜಿತ ವಾಚನಾಲಯಕ್ಕೆ ಮಾಸ್ಟರ್ ಪ್ಲಾನ್: ಯು.ಟಿ. ಖಾದರ್
Share this Article
  • FB
  • TW
  • Linkdin
  • Email

ಸಾರಾಂಶ

ಇದೇ ಸಂದರ್ಭ ಯು.ಟಿ.ಖಾದರ್ ಅವರು ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ವೆನ್ಲಾಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಸಮುದಾಯ ವಾಚನಾಲಯ ನಿರ್ಮಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.

ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸಮುದಾಯ ವಾಚನಾಲಯದ 2ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಪತ್ರಕರ್ತರ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳು ಮುತುವರ್ಜಿ ವಹಿಸಿ ಸಮುದಾಯ ವಾಚನಾಲಯ ಸೇವೆ ಒದಗಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ ಸಂಚಾಲಕ ಡಾ.ಕೆ.ಆರ್. ಕಾಮತ್ ಮಾತನಾಡಿ, ಪ್ರತಿ ತಿಂಗಳು ಸುಮಾರು 6 ಸಾವಿರ ಮಂದಿ ವಾಚನಾಲಯದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ವೆನ್ಲಾಕ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಜೆಸಿಂತಾ ಡಿಸೋಜ, ಆರ್‌ಎಂಒ ಡಾ.ಸುಧಾಕರ್, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್‌ನ ವ್ಯವಸ್ಥಾಪಕ ಸುರೇಶ್ ಶೆಟ್ಟಿ, ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಸಲಹೆಗಾರರಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ್, ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ ಇದ್ದರು. ಇದೇ ಸಂದರ್ಭ ಯು.ಟಿ.ಖಾದರ್ ಅವರು ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ವಂದಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ನಿರೂಪಿಸಿದರು.