ಕನ್ನಡಪ್ರಭ ವಾರ್ತೆ ನಾಪೋಕ್ಲುಇಲ್ಲಿಗೆ ಸಮೀಪದ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆ ಆಯೋಜಿಸಲಾಯಿತು. ಶ್ರೀ ರಾಜರಾಜೇಶ್ವರಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 67 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ 5ನೇ ತರಗತಿ ವಿದ್ಯಾರ್ಥಿಗಳಾದ ಯಶಸ್ ಮಂದಣ್ಣ ಕೆ.ಬಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ರಶ್ವಿನ್ ಎಂ.ಎನ್. ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಹಾಗೂ 4ನೇ ತರಗತಿ ವಿದ್ಯಾರ್ಥಿ ತನ್ಮಯ್ ಬಿ.ಎಂ ಜಿಲ್ಲಾಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಶಾಲೆಯ ಗಣಿತ ಶಿಕ್ಷಕರಾಗಿರುವ ಅನಿಲ್ ಯು ಎಂ, ಕುದುಪಜೆ ಬೃಂದಾ ಕವನ್ ಮತ್ತು ರಾಜೇಶ್ವರಿ ಡಿ.ಎಂ, ಶಾಲೆಯ ಮುಖ್ಯ ಶಿಕ್ಷಕರಾದ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸ್ವರೂಪ್ ಕೆ ಬಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.ಗಣಿತ ಪ್ರತಿಭಾ ಪರೀಕ್ಷೆ : ಯಶಸ್ ಮಂದಣ್ಣ ರಾಜ್ಯಮಟ್ಟದಲ್ಲಿ ದ್ವಿತೀಯ
ಶಾಲೆಯ 5ನೇ ತರಗತಿ ವಿದ್ಯಾರ್ಥಿಗಳಾದ ಯಶಸ್ ಮಂದಣ್ಣ ಕೆ.ಬಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.