ಸಾರಾಂಶ
ಆಟೋ ಚಾಲಕರ ಮಕ್ಕಳು ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ, ಅಂತಹ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಆದಿಚುಂಚನಗಿರಿ ಮಠ ವಹಿಸಿಕೊಳ್ಳಲು ಸಿದ್ಧವಿದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಆಟೋ ಚಾಲಕರ ಮಕ್ಕಳು ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ, ಅಂತಹ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಆದಿಚುಂಚನಗಿರಿ ಮಠ ವಹಿಸಿಕೊಳ್ಳಲು ಸಿದ್ಧವಿದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.ಶಂಕರ್‌ನಾಗ್ ಜನ್ಮದಿನ ಅಂಗವಾಗಿ ಪೀಸ್ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ ಅಸೋಸಿಯೇಷನ್, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಹಾಗೂ ವಿಷ್ಣು ಸೇನಾ ಸಮಿತಿಯಿಂದ ನಗರದ ಶಾಲಿನಿ ಗ್ರೌಂಡ್‌ನಲ್ಲಿ ಆಯೋಜಿಸಿದ್ದ 12ನೇ ವರ್ಷದ ಚಾಲಕರ ದಿನಾಚರಣೆ ಹಾಗೂ ಸನ್ನಡತೆ ಚಾಲಕರಿಗೆ ಚಿನ್ನದ ಪದಕ ಪ್ರಧಾನ ಮಾಡಿ ಸ್ವಾಮೀಜಿ ಮಾತನಾಡಿದರು.ಇಂದು 4ನೇ ಕೈಗಾರಿಕಾ ಕ್ರಾಂತಿಯಲ್ಲಿ ನಾವು ಬದುಕುತ್ತಿದ್ದೇವೆ. ತಂತ್ರಜ್ಞಾನ ದೊಡ್ಡಮಟ್ಟದಲ್ಲಿ ಬೆಳೆಯುತ್ತಿದೆ. ಆಟೋ ಚಾಲಕರು ತಮ್ಮ ಬದುಕಿನಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.
ಶಾಸಕ ಸಿ.ಕೆ. ರಾಮಮೂರ್ತಿ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಪೀಸ್ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ ಅಸೋಸಿಯೇಷನ್ ಅಧ್ಯಕ್ಷ ರಘು ನಾರಾಯಣ ಗೌಡ ಮತ್ತಿತರರು ಉಪಸ್ಥಿತರಿದ್ದರು.;Resize=(128,128))