ಗರಿಷ್ಠ ಮಾರಾಟ ಬೆಲೆ ಕಾನೂನಾತ್ಮಕ ಜಾರಿಗೊಳಿಸಿ

| Published : Feb 11 2025, 12:47 AM IST

ಸಾರಾಂಶ

ರಾಜ್ಯ ಸರ್ಕಾರ ರೈತವಿರೋಧಿಯಾದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಇದೂವರೆಗೂ ಕಾಯ್ದೆಗಳ ವಾಪಸ್‌ ಪಡೆದಿಲ್ಲ. ಕೂಡಲೇ ತಿದ್ದುಪಡಿಗೊಳಿಸಿದ 3 ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಿಶ್ಚಿತ ಎಂದು ರೈತಸಂಘ ಹಾಗೂ ಹಸಿರು ಸೇನೆ ತಾಲೂಕು ಗೌರವಾಧ್ಯಕ್ಷ ಕುರುವ ಗಣೇಶ್ ಎಚ್ಚರಿಸಿದರು.

ಹೊನ್ನಾಳಿ ಪ್ರತಿಭಟನೆಯಲ್ಲಿ ರೈತ ಸಂಘಟನೆಗಳ ಒತ್ತಾಯ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ರಾಜ್ಯ ಸರ್ಕಾರ ರೈತವಿರೋಧಿಯಾದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಇದೂವರೆಗೂ ಕಾಯ್ದೆಗಳ ವಾಪಸ್‌ ಪಡೆದಿಲ್ಲ. ಕೂಡಲೇ ತಿದ್ದುಪಡಿಗೊಳಿಸಿದ 3 ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಿಶ್ಚಿತ ಎಂದು ರೈತಸಂಘ ಹಾಗೂ ಹಸಿರು ಸೇನೆ ತಾಲೂಕು ಗೌರವಾಧ್ಯಕ್ಷ ಕುರುವ ಗಣೇಶ್ ಎಚ್ಚರಿಸಿದರು.

ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಎಂಎಸ್‌ಪಿ (ಗರಿಷ್ಠ ಮಾರಾಟ ಬೆಲೆ)ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಡು ದೆಹಲಿಯಲ್ಲಿ 500ಕ್ಕೂ ಹೆಚ್ಚು ಸಂಘಟನೆಗಳು 14 ತಿಂಗಳ ಕಾಲ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಿದ್ದವು. ಈ ಹೋರಾಟದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣತ್ಯಾಗ ಮಾಡಿದರು. ಆಗಿನ ವಿಪಕ್ಷ ಕಾಂಗ್ರೆಸ್ ಕೂಡ ರೈತರ ಜತೆ ಭಾಗಿಯಾಗಿತ್ತು. ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ರೈತವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಿತು. ಆದರೆ, ಈ ರಾಜ್ಯದಲ್ಲಿ ಮಾತ್ರ ಇನ್ನೂ ಕೃಷಿ ತಿದ್ದುಪಡಿ ಕಾಯ್ದೆಗಳು ರದ್ದಾಗಿಲ್ಲ ಎಂದು ದೂರಿದರು.

ಪ್ರಸ್ತುತ ಉತ್ತಮ ಗುಣಮಟ್ಟದ, ನಿಯಮಿತವಾದ ವಿದ್ಯುತ್ ರೈತರಿಗೆ ದೊರೆಯುತ್ತಿದೆ. ಈ ಹಿನ್ನೆಲೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿದಂತೆ ಎಲ್ಲ ವಿದ್ಯುತ ಸರಬರಾಜು ನಿಗಮಗಳ ಖಾಸಗೀಕರಣ ರದ್ದು ಮಾಡಬೇಕು. ಮೈಕ್ರೋಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೂಡಲೇ ಅಂಕಿತ ಹಾಕಿ ಮೈಕ್ರೋ ಫೈನಾನ್ಸ್‌ಗಳ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಎಂದರು.

ತಾಲೂಕು ಅಧ್ಯಕ್ಷ ದೊಡ್ಡೇರಿ ಬಸವರಾಜಪ್ಪ ಮಾತನಾಡಿ, ರಾಜ್ಯ ಸರ್ಕಾರವು ರೈತವಿರೋಧಿ ಕಾಯ್ದೆಗಳ ರದ್ದುಪಡಿಸಿಲ್ಲ, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂಬ ವಾಗ್ದಾನ ಈಡೇರಿಸಿಲ್ಲ. ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.

ಉಪವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ಗೊರಟ್ಟಿ ಮಂಜಣ್ಣ, ಬಿ.ಜಿ. ಷಣ್ಮುಖಪ್ಪ, ಸಿ.ಎಚ್. ಬಸವರಾಜಪ್ಪ, ಅರಬಗಟ್ಟೆ ಬಸವರಾಜಪ್ಪ ,ಷಣ್ಮಖಪ್ಪ, ರವಿಕುಂದೂರು, ತರಗನಹಳ್ಳಿ ಗಣೇಶ ಸೇರಿದಂತೆ ಅನೇಕರು ಹಾಜರಿದ್ದರು.

- - - -10ಎಚ್.ಎಲ್.ಐ2..ಜೆಪಿಜಿ:

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಒತ್ತಾಯಿಸಿ ಹೊನ್ನಾಳಿಯಲ್ಲಿ ಸೋಮವಾರ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.