ಸಾರಾಂಶ
ಹುಬ್ಬಳ್ಳಿ:
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ. ಸರ್ವರ ಏಳಿಗೆ ನಮ್ಮೆಲ್ಲರ ಗುರಿಯಾಗಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಪ್ರಕಾಶ ನಾಶಿ ಹೇಳಿದರು.ಅವರು ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಸಕ ಎನ್.ಎಚ್. ಕೊನರೆಡ್ಡಿ ಮಾತನಾಡಿ, ರಾಷ್ಟ್ರೀಯ ಹಬ್ಬವನ್ನು ನಮ್ಮ ಹಬ್ಬ ಎಂದು ಆಚರಿಸಬೇಕೆಂದು ಕರೆ ನೀಡಿದರು. ಶಹರ ತಹಸೀಲ್ದಾರ್ ಕಲಗೌಡ ಪಾಟೀಲ, ತಾಪಂ ಇಒ ಉಮೇಶ ಬೊಮ್ಮಕ್ಕನವರ, ಅಪರ ತಹಸೀಲ್ದಾರ್ ಜಿ.ವಿ. ಪಾಟೀಲ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ವಿವಿಧ ಇಲಾಖೆ ಅಧಿಕಾರಿಗಳಿದ್ದರು.ಪಾಲಿಕೆಯಲ್ಲಿ ಧ್ವಜಾರೋಹಣ:
ಪಾಲಿಕೆಯಿಂದ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇವೆ. ಸ್ವಚ್ಛತೆ, ಆರೋಗ್ಯದ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸುವ ಅವಶ್ಯಕತೆ ಇದ್ದು, ಉಳಿದ ಪಾಲಿಕೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡೋಣ ಎಂದು ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮಹಾನಗರ ಪಾಲಿಕೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ವೇಳೆ ಪಾಲಿಕೆ ಸದಸ್ಯರಾದ ಉಮಾ ಮುಕುಂದ, ಇಮ್ರಾನ್ ಎಲಿಗಾರ, ಅರ್ಜುನ ಪಾಟೀಲ, ಚಂದ್ರಿಕಾ ಮೇಸ್ತ್ರಿ, ನಿರಂಜನ ಹಿರೇಮಠ, ಶ್ರತಿ ಚಲವಾದಿ, ಪ್ರೀತಿ ಲದವಾ ಇದ್ದರು.ಉಪ ಕಾರಾಗೃಹ:
ಇಲ್ಲಿನ ಉಪ ಕಾರಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಾಗಲಕೋಟೆಯ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜಶೇಖರ ತಿಳಿಗಂಜಿ ಮಾತನಾಡಿ, ಕೈದಿಗಳು ಸಮಾಜದ ಮುಖ್ಯ ವಾಹಿನಿಯಲ್ಲಿ ಉತ್ತಮ ಪ್ರಜೆಯಾಗಿ ಬದುಕುವಂತೆ ಕರೆ ನೀಡಿದರು.ಇದೇ ವೇಳೆ ನ್ಯಾಯಾಧೀಶ ರಾಜಶೇಖರ ತಿಳಿಗಂಜಿ, ವೈದ್ಯಾಧಿಕಾರಿ ಡಾ. ನೀಲಾ ಕಾಶಿನಕುಂಟಿ ಅವರನ್ನು ಸನ್ಮಾನಿಸಲಾಯಿತು. ಅಧೀಕ್ಷಕ ಶಹಾಬುದ್ದೀನ್ ಕಾಲೇಖಾನ್ ಅಧ್ಯಕ್ಷತೆ ವಹಿಸಿದ್ದರು. ಬಂಧಿಗಳಿಗಾಗಿ ಹಮ್ಮಿಕೊಂಡ ಚೆಸ್, ಕೇರಂ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಾರಿಗೆ ಸಂಸ್ಥೆ:ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುರುವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಅತ್ಯುತ್ತಮ ಸಾಧನೆ ಮಾಡಿದ ಸಾರಿಗೆ ಸಿಬ್ಬಂದಿಗೆ ಶ್ಲಾಘನೀಯ ಹಾಗೂ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಜೇಂದ್ರ, ಅಧಿಕಾರಿಗಳಾದ ಸದಾನಂದ ಒಡೆಯರ, ಐ.ಐ. ಕಡ್ಲಿಮಟ್ಟಿ, ಐ.ಜಿ. ಮಾಗಾಮಿ, ವಿಭಾಗೀಯ ಭದ್ರತಾ ಅಧೀಕ್ಷಕಿ ಸುಮಂಗಲ ಹಿರೇಮಠ, ಮೇಲ್ವಿಚಾರಕರು, ಸಿಬ್ಬಂದಿಗಳಿದ್ದರು.