ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ : ಎಚ್‌.ಡಿ. ತಮ್ಮಯ್ಯ

| Published : Oct 03 2024, 01:30 AM IST

ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ : ಎಚ್‌.ಡಿ. ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸತ್ಯ, ಶಾಂತಿ, ಅಹಿಂಸೆಯ ಸಂದೇಶ ಸಾರುವ ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಡಿಸಿ ಕಚೇರಿಯ ನೆನಪಿನಂಗಳದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸತ್ಯ, ಶಾಂತಿ, ಅಹಿಂಸೆಯ ಸಂದೇಶ ಸಾರುವ ಗಾಂಧೀಜಿಯವರ ವಿಚಾರಧಾರೆಗಳು ವಿಶ್ವಾದ್ಯಾಂತ ಪಸರಿಸಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದ ನೆನಪಿನಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಅಹಿಂಸೆ ಮತ್ತು ಸತ್ಯ ಬಳಸಿಕೊಂಡು ಹೋರಾಟದ ಬಗೆಗಿನ ಅವರ ವಿಶಿಷ್ಟ ವಿಧಾನ ಸ್ವಾತಂತ್ರ್ಯ ಚಳುವಳಿಯ ಇತಿಹಾಸದ ಹಾದಿಯನ್ನೇ ಬದಲಾಯಿಸಿತು. ಶಾಂತಿಯುತ ಮಾರ್ಗಗಳ ಮೂಲಕ ಸ್ವಾತಂತ್ರ್ಯಸಾಧಿಸುವ ಅವರ ನಂಬಿಕೆಗಾಂಧೀಜಿಯನ್ನು ಪ್ರತ್ಯೇಕಿಸಿತು. ಗಾಂಧೀಜಿ ಯವರ ಸತ್ಯಾಗ್ರಹ ಮತ್ತು ಅಹಿಂಸಾತ್ಮಕ ಪ್ರತಿರೋಧಕ ಪರಿಕಲ್ಪನೆ ಹಿಂಸಾಚಾರ ಆಶ್ರಯಿಸದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲು ಲಕ್ಷಾಂತರ ಜನರನ್ನು ಪ್ರೇರೆಪಿಸಿತು ಎಂದರು.ಸ್ವಚ್ಛ ಭಾರತದ ಕನಸನ್ನು ಮೊದಲಿಗೆ ಕಂಡವರು ಮಹಾತ್ಮ ಗಾಂಧೀಜಿ. ಸ್ವಾತಂತ್ರ್ಯಕ್ಕಿಂತ ನೈರ್ಮಲ್ಯ ಮುಖ್ಯ ಎಂಬುದು ಗಾಂಧೀಜಿ ಆಶಯ ವಾಗಿತ್ತು. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ನೈರ್ಮಲ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗಾಂಧೀಜಿ ಪರಿಕಲ್ಪನೆ ಇಂದು ನನಸಾಗಬೇಕಾಗಿದೆ ಎಂದು ತಿಳಿಸಿದರು.ಭಾರತದ ಎರಡನೇ ಪ್ರಧಾನಿಯಾದ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಸರಳ ಜೀವನಕ್ಕೆ ಉದಾಹರಣೆಯಾಗಿದ್ದಾರೆ. ಜೈ ಜವಾನ್ ಜೈ ಕಿಸಾನ್ ಎಂಬ ಅವರ ಘೋಷಾ ವಾಕ್ಯ ದೇಶದ ಜನತೆಯಲ್ಲಿ ಹೊಸ ಚೈತನ್ಯ ಮೂಡಿಸಿದೆ. ಅವರ ದೇಶ ಪ್ರೇಮ ಇಂದಿನ ಯುವ ಜನತೆಗೆ ಪ್ರೇರಣೆಯಾಗಬೇಕು ಎಂದ ಅವರು, ಗಾಂಧೀಜಿಯವರ ವಿಚಾರಧಾರೆಗಳನ್ನು ತಮ್ಮಲ್ಲಿ ಆಳವಡಿಸಿಕೊಂಡು ಮುನ್ನಡೆಯಬೇಕು ಎಂದರು.ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಮಾತನಾಡಿ, ಗಾಂಧೀಜಿಯವರು ದೇಶದ ಜನತೆಗೆ ಸಾಮರಸ್ಯದ ಬದುಕಿನ ಮಹತ್ವ ಸಾರಿದರು. ಸರ್ವ ಧರ್ಮವನ್ನು ಗೌರವಿಸುವ ಅವರ ಮನೋಭಾವ ಪ್ರತಿಯೊಬ್ಬ ಭಾರತೀಯರಲ್ಲೂ ಮೂಡಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜೈ ಜವಾನ್ ಜೈ ಕಿಸಾನ್ ಎಂಬ ವಾಕ್ಯ ಕೃಷಿ ಪ್ರಧಾನ ದೇಶವಾದ ಭಾರತದ ಪ್ರತಿಯೊಬ್ಬ ರೈತರ ಗೌರವ ಹೆಚ್ಚಿಸುತ್ತದೆ. ಪ್ರಸ್ತುತ ಯುವ ಜನರಲ್ಲಿ ಕೃಷಿ ಚಟುವಟಿಕೆಗಳ ಮಹತ್ವ ಹಾಗೂ ಕೃಷಿಯಲ್ಲಿ ಲಾಭದಾಯಕವಾದ ಜೀವನ ನಿರ್ಮಿಸಬಹುದು ಎಂಬ ವಿಚಾರ ತಿಳಿಸಿ ಅವರನ್ನು ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಬೇಕು ಎಂದರು.ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಮಾತನಾಡಿ, ಯಾವುದೇ ಶಸ್ತ್ರ ಬಳಸದೆ, ಅಹಿಂಸಾ ಹಾಗೂ ಶಾಂತಿ ಮಾರ್ಗದಿಂದ ದೇಶವು ಸ್ವಾತಂತ್ರ ಗಳಿಸಲು ಕಾರಣೀಕೃತರಾದ ಗಾಂಧೀಜಿಯವರ ಬದುಕು ಪ್ರೇರಣೀಯವಾದುದು. ದೇಶದ ಸೈನಿಕರ ಹಾಗೂ ರೈತರನ್ನು ಗೌರವಿಸಿ ಬೆಂಬಲಿಸಿ ಅವರನ್ನು ದೇಶದ ಶಕ್ತಿ ಎಂದು ಹೇಳುವ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳ ಸಜ್ಜನಿಕೆಯ ಜೀವನ ಆದರ್ಶ ಮೈಗೂಡಿಸಿ ಕೊಳ್ಳಬೇಕು ಎಂದು ಹೇಳಿದರುಸುರೇಂದ್ರ ನಾಯಕ್ ಮತ್ತು ತಂಡದವರು ವಿವಿಧ ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡಿದರು. ನಾಗಶ್ರೀ ತ್ಯಾಗರಾಜ್ ಭಗವದ್ಗೀತೆ, ಔರಂಗ್ ಪಾಷಾ ಕುರಾನ್ ಹಾಗೂ ಫಾದರ್ ಬಿಷಪ್ ಥಾಮಸ್ ಅಂತೋಣಿ ಬೈಬಲ್ ಸರ್ವಧರ್ಮಗಳ ಧಾರ್ಮಿಕ ಪಠಣ ಮಾಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧಿ ಜಯಂತಿ ಅಂಗವಾಗಿ ಪದವಿ, ಸ್ನಾತಕೋತ್ತರ, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.ಕಾರ್ಯಕ್ರಮದಲ್ಲಿ ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್, ನಗರಸಭೆ ಪೌರಾಯುಕ್ತ ಬಸವ ರಾಜ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

2 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದ ನೆನಪಿನಂಗಳದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.